ಬೆಂಗಳೂರು: 2021-22ನೇ ಸಾಲಿನಲ್ಲಿ ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು,ತಾತ್ಕಾಲಿಕವಾಗಿ 4 ಸಾವಿರ ಅತಿಥಿ ಶಿಕ್ಷಕರನ್ನು 2ನೇ ಹಂತದಲ್ಲಿ ಜಿಲ್ಲಾವಾರು ತುಂಬಿಸಲು ಅರ್ಜಿಯನ್ನು ಆಹ್ವಾನಿಸಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ.ವಿಶಾಲ್ ಆರ್ ಅವರು ಆದೇಶ ಹೊರಡಿಸಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೆಪ್ಟೆಂಬರ್ 2021 ರಿಂದ ಮಾರ್ಚ್ 2022ರವರೆಗೆ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಖಾಲಿ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಹೆಚ್ಚುವರಿಯಾಗಿ 2ನೇ ಹಂತದಲ್ಲಿ 4 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.4 ಸಾವಿರ ಅತಿಥಿ ಶಿಕ್ಷಕರ ಹುದ್ದೆಗಳನ್ನು ಈ ಹಿಂದೆ ವಿಧಿಸಿರುವಂತ ಷರತ್ತುಗಳಿಗೆ ಒಳಪಟ್ಟು ಜಿಲ್ಲಾ ಉಪ ನಿರ್ದೇಶಕರು ಹೆಚ್ಚು ಖಾಲಿ ಹುದ್ದೆಗಳಿರುವ ತಾಲ್ಲೂಕುಗಳ ಅಗತ್ಯತೆ ಆಧರಿಸಿ, ಮರು ಹಂಚಿಕೆಯನ್ನು ಮಾಡಿ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.
ಅಂದಹಾಗೇ ಜಿಲ್ಲೆಯ ವಿವಿಧ ತಾಲೂಕು ಹಂತದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವಂತ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಆಯಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ, ಅರ್ಹ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇದ್ದಾವೆ ಎನ್ನುವ ಬಗ್ಗೆ, ಈ ಕೆಳಗಿನ ಸುತ್ತೋಲೆಯನ್ನು ಗಮನಿಸಬಹುದಾಗಿದೆ.


