Home » ನ.6 :ಕಡಬದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಬೃಹತ್ ಜನ ಜಾಗೃತಿ ಸಮಾವೇಶ

ನ.6 :ಕಡಬದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಬೃಹತ್ ಜನ ಜಾಗೃತಿ ಸಮಾವೇಶ

by Praveen Chennavara
0 comments

ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆ ಇದರ ವತಿಯಿಂದ ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ಜನ ಜಾಗೃತಿ ಸಮಾವೇಷ ನ.6ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಶ್ರೀಕ್ಷೇತ್ರ ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿಯವರು ಉಪಸ್ಥಿತರಿರಲಿದ್ದು ಜಾಗೃತಿ ಸಂದೇಶವನ್ನು ನೀಡಲಿದ್ದಾರೆ. ವಿ.ಹಿಂ.ಪ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಎಂ.ಬಿ.ಪುರಾಣಿಕ್ ಅವರು ಅಧ್ಯಕ್ಷತೆ ವಹಿಸಲಿದ್ದು, ವಿ.ಹಿಂ.ಪ. ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರು ಪ್ರಮುಖ ಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾವು ಕಡಬ ವೃದ್ಧಿ ಹೋಟೆಲ್ ಮುಂಬಾಗದಿಂದ ದುರ್ಗಾಂಬಿಕಾ ದೇವಸ್ಥಾನದವರೆಗೆ ನಡೆಯಲಿದೆ.

You may also like

Leave a Comment