Home » Ration card: ಪಡಿತರ ಕಾರ್ಡ್ ತಿದ್ದುಪಡಿ ಕೊನೆಯ ದಿನ ವಿಸ್ತರಣೆ

Ration card: ಪಡಿತರ ಕಾರ್ಡ್ ತಿದ್ದುಪಡಿ ಕೊನೆಯ ದಿನ ವಿಸ್ತರಣೆ

by Praveen Chennavara
0 comments
Ration card

Ration card :ಪಡಿತರ ಚೀಟಿಯಲ್ಲಿ(Ration card) ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಅವಧಿಯನ್ನು ಮತ್ತಷ್ಟು ವಿಸ್ತರಿಸಿರುವುದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿವೆ.

ಆ.21 ಸೋಮವಾರದವರೆಗೆ ಮಾತ್ರ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಈಗ ಗ್ರಾಹಕರ ಒತ್ತಾಯದ ಮೇರೆಗೆ ತಿದ್ದುಪಡಿ, ಸೇರ್ಪಡೆ ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸಲಾಗುವುದು. ಸರ್ವ‌ರ್ ಸಮಸ್ಯೆಯನ್ನು ನಿವಾರಿಸುವ ಹಿನ್ನೆಲೆಯಲ್ಲಿ ಹಂತ-ಹಂತವಾಗಿ ಗ್ರಾಹಕರಿಗೆ ಅವಕಾಶ ನೀಡಲಾಗುವುದು.

ಆನ್‌ಲೈನ್‌ ಅಥವಾ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಸೇವೆ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಾರ್ವಜನಿಕ ವಿತರಣೆ (ವಿಜಿಲೆನ್ಸ್) ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರಕುಮಾರ್ ಗಂಗಾ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಏಪ್ರಿಲ್‌-ಮೇ ತಿಂಗಳಲ್ಲಿ ಹೊಸದಾಗಿ ಎಪಿಎಲ್‌, ಬಿಪಿಎಲ್‌ ಕಾರ್ಡ್‌ ಮಾಡಿಸುವುದು, ಹೆಸರು ತಿದ್ದುಪಡಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಹೊಸ ಸರಕಾರ ಅಧಿಕಾರಕ್ಕೆ ಬಂದರೂ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಗಳ ಹಿನ್ನೆಲೆಯಲ್ಲಿ ತಾತ್ಕಾಲಿಕ ಸ್ಥಗಿತವನ್ನು ಸುಮಾರು ನಾಲ್ಕೂವರೆ ತಿಂಗಳ ಕಾಲ ಮುಂದುವರಿಸಲಾಗಿತ್ತು.

ಇದನ್ನೂ ಓದಿ: World’s Cheapest House: ಕೇವಲ 83ರೂ. ಗೆ ಸಿಗುತ್ತೆ ಸುಂದರವಾದ ಮನೆ ; ಅದ್ಭುತ ವೈಶಿಷ್ಟ್ಯತೆ ಹೊಂದಿರುವ ಭಾರೀ ಅಗ್ಗದ ಮನೆ ಮಾರಾಟಕ್ಕಿರೋದು ಎಲ್ಲಿ ?

You may also like