Home » Fix Date Time For fireworks In Karnataka: ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಲು ಗೈಡ್‌ಲೈನ್ಸ್‌ ಜಾರಿ! ಪಟಾಕಿ ಸಿಡಿಸಲು ಸಮಯ, ದಿನಾಂಕ ನಿಗದಿ!!!

Fix Date Time For fireworks In Karnataka: ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಲು ಗೈಡ್‌ಲೈನ್ಸ್‌ ಜಾರಿ! ಪಟಾಕಿ ಸಿಡಿಸಲು ಸಮಯ, ದಿನಾಂಕ ನಿಗದಿ!!!

by Mallika
2 comments
Fireworks In Karnataka

Fireworks In Karnataka: ದೀಪಾವಳಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದ್ದು, ಪಟಾಕಿ ಸಿಡಿಸುವ(Fireworks In Karnataka) ಮೊದಲು ಸುಪ್ರೀಂ ಕೋರ್ಟ್‌ ನೀಡಿದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಇತರೆ ಪಟಾಕಿ ಬಳಕೆ ನಿಷೇಧ ಮಾಡಲಾಗಿದೆ.

ಮಕ್ಕಳಲ್ಲಿ, ಸಾರ್ವಜನಿಕರಿಗೆ ಪಟಾಕಿ ಬಗ್ಗೆ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮ ನಡೆಸಬೇಕು. ನಿಷೇಧಿತ ಪ್ರದೇಶ, ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಆಸ್ಪತ್ರೆಗಳಲ್ಲಿ ಪಟಾಕಿ ಸಿಡಿಸಬಾರದು ಎಂದು ಹೇಳಲಾಗಿದೆ.

ನ.11 ರಿಂದ 15 (ದೀಪಾವಳಿ ಸಂದರ್ಭ) ರವರೆಗೆ ಪಟಾಕಿ ಸಿಡಿಸಲು ಸಮಯ ನಿಗದಿ ಮಾಡಲಾಗಿದೆ. ಮಂಡಳಿಯ ಪ್ರಕಾರ ರಾತ್ರಿ 8 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳು:
ಸುಪ್ರೀಂಕೋರ್ಟ್‌ ಆದೇಶಗಳನ್ನು ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಅಧೀನ ಅಧಿಕಾರಿಗಳ ಗಮನಕ್ಕೆ ತಂದು ಆದೇಶ ಪಾಲಿಸಲು ಸೂಚಿಸಬೇಕು.
ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆಸಕ್ತ ನಾಗರಿಕರು ಹಾಗೂ ಸ್ಥಳೀಯ ಸರಧಿಕಾಧಿರೇಧಿತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ರಚಿಸಬೇಕು.
ಕಾರ‍್ಯಪಡೆಯು ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿಹಸಿರು ಪಟಾಕಿಯಲ್ಲದೆ ಇನ್ಯಾಧಿವುಧಿದಾಧಿದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಇದ್ದಲ್ಲಿ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ವಿಧಿರುದ್ಧ ಕ್ರಿಮಿನಲ್‌ ಮೊಕದ್ದಮೆಯನ್ನು ಹೂಡಬೇಕು.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗು ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.
ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವ ಘನ ತ್ಯಾಜ್ಯ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು. ಹೊರ ರಾಜ್ಯಗಳಿಂದ ನಿಷೇಧಿತ ಪಟಾಕಿ ಸಾಗಾಟ ಮಾಡುತ್ತಿದ್ದಲ್ಲಿಅವುಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಳ್ಳಬೇಕು.
ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್‌ ಮೇಲೆ ಹಸಿರು ಪಟಾಕಿಯ ಚಿಹ್ನೆ, ಕ್ಯು ಆರ್‌ ಕೋಡ್‌ ಇರುವುದನ್ನು ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತಪಡಿಸಿಕೊಳ್ಳಬೇಕು.

ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್‌ಗಳನ್ನು ರ್ಯಾಂಡಮ್‌ ಆಗಿ ಸಂಗ್ರಹಿಸಿ, ನಿಗದಿತ ವಿಧಿ ವಿಧಾನಗಳ ಮೂಲಕ ಶಬ್ದ ಮಟ್ಟವನ್ನು ಮಾಪನ ಮಾಡಬೇಕು. ನಿಗದಿತ ಗುಣಮಾಪನಗಳಿಗೆ ಸರಿಹೊಂದಿದ್ದಲ್ಲಿ ಅವುಗಳನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು.
ನ್ಯಾಯಾಲಯದ ಆದೇಶದಂತೆ ಎಎಕ್ಯೂಎಂ ಮತ್ತು ಶಬ್ದ ಪ್ರಮಾಣ ನಿರ್ವಹಣೆಗೆ ಕ್ರಮ ವಹಿಸಬೇಕು. ಮಾದರಿ ಮತ್ತು ಗುಣಮಾಪನಗಳ ವಿಶ್ಲೇಷಣೆ ಹಾಗೂ ಶಬ್ದ ಪ್ರಮಾಣ ನಿರ್ವಹಣೆ ವಿಷಯದಲ್ಲಿ ಎಸ್‌ ಒ ಡಾ. ರಾಘವೇಂದ್ರ ಅಧಿವರನ್ನು 9880046189 ಸಂಪರ್ಕಿಸಲು ಕೋರಲಾಗಿದೆ.

ಇದನ್ನೂ ಓದಿ: KPTCL ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌!

 

You may also like

Leave a Comment