Home » Old Pension Scheme: NPS ನೌಕರರಿಗೆ ಸಿಹಿಸುದ್ದಿ ; ಹಳೆ ಪಿಂಚಣಿ ಯೋಜನೆ ಮರು ಜಾರಿ ಬಗ್ಗೆ ಬಜೆಟ್ ನಲ್ಲಿ ಘೋಷಣೆ !

Old Pension Scheme: NPS ನೌಕರರಿಗೆ ಸಿಹಿಸುದ್ದಿ ; ಹಳೆ ಪಿಂಚಣಿ ಯೋಜನೆ ಮರು ಜಾರಿ ಬಗ್ಗೆ ಬಜೆಟ್ ನಲ್ಲಿ ಘೋಷಣೆ !

0 comments
Old Pension Scheme

Old Pension Scheme: NPS ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಹಳೆಪಿಂಚಣಿ ಯೋಜನೆ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಬಜೆಟ್ ನಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಘೋಷಣೆ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.

ಕೇಂದ್ರ ಮತ್ತು ರಾಜ್ಯಗಳಲ್ಲಿ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ (Old Pension Scheme) ಯೋಜನೆಯನ್ನು 2004ರಲ್ಲಿ ನಿಲ್ಲಿಸಿ, ಹೊಸ ಪಿಂಚಣಿ ವ್ಯವಸ್ಥೆಯನ್ನು ಪರಿಚಯಿಸಲಾಯಿತು. ಈ ಹಿನ್ನೆಲೆ ಕಳೆದ ಹಲವು ಸಮಯಗಳಿಂದ ಎನ್‌ಪಿಎಸ್‌ (NPS) ರದ್ದುಗೊಳಿಸಿ, ಒಪಿಎಸ್‌ (OPS) ಜಾರಿಗೊಳಿಸಬೇಕು ಎಂದು ದೇಶಾದ್ಯಂತ ನೌಕರರಿಂದ (employees) ಒತ್ತಾಯ ಕೇಳಿ ಬರುತ್ತಿದೆ. ಇದೀಗ ಈ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಹಾಗೂ ವಿವಿಧ ನೌಕರರ ಸಂಘಟನೆಗಳ ಪದಾಧಿಕಾರಿಗಳ ನಿಯೋಗದಿಂದ ಭೇಟಿ ಮಾಡಲಾಗಿದ್ದು, ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಮರು ಜಾರಿ ಮಾಡುವಂತೆ ಮನವಿ ಮಾಡಲಾಗಿದೆ. ಮನವಿಗೆ ಸ್ಪಂದಿಸಿದ ಸಿಎಂ, ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಬಜೆಟ್ ನಲ್ಲಿ ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜಸ್ಥಾನ, ಛತ್ತೀಸ್ನಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಸಿ ಮರು ಜಾರಿ ಮಾಡಲಾಗಿದೆ. ಕರ್ನಾಟಕದಲ್ಲಿಯೂ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂದು ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ತೇಜ ಹೇಳಿದ್ದಾರೆ. ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದಾಗಿ ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಉಚಿತ ಪ್ರಯಾಣದ ಆಸೆಗಾಗಿ ಪಶ್ಚಿಮ ಬಂಗಾಳದ ಮಹಿಳೆಯೋರ್ವಳು ಹೀಗಾ ಮಾಡೋದು?

You may also like

Leave a Comment