Ration cards cancelled: ಪ್ರತಿ ತಿಂಗಳು ರೇಷನ್ ಪಡೆಯುದಿಲ್ಲವೋ ಅಂತಹವರಿಗೆ ಬಿಗ್ ಶಾಕ್ ಕಾದಿದೆ. ಇದೀಗ ಕಾರ್ಡ್ ರದ್ದತಿಗೆ ಆಹಾರ ಇಲಾಖೆ ಮುಂದಾಗಿದೆ. ಹೌದು, 6 ತಿಂಗಳಿನಿಂದ ಪಡಿತರ ಪಡೆಯದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಒಟ್ಟು 3.26 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ (Ration cards cancelled) ಎಂದು ಮಾಹಿತಿ ದೊರೆತಿದೆ.
ಆರು ತಿಂಗಳಿಂದ ಒಟ್ಟು 3.26 ಲಕ್ಷ ಕುಟುಂಬ ಪಡಿತರವನ್ನೇ ಪಡೆದಿಲ್ಲ, ಈ ವಾರದಲ್ಲಿ 3.26 ಲಕ್ಷ ಕಾರ್ಡ್ಗಳು ರದ್ದಾಗಲಿವೆ. ರಾಜ್ಯದಲ್ಲಿ ಒಟ್ಟು 52.34 ಲಕ್ಷ ರೇಷನ್ ಕಾರ್ಡ್‌ಗಳಿವೆ. 1 ಕೋಟಿ 52 ಲಕ್ಷದಷ್ಟು ಕಾರ್ಡ್ದಾರರಿದ್ದಾರೆ, BPL-1,27,82,893 ರೇಷನ್ ಕಾರ್ಡ್‌ಗಳಿವೆ. 4.37 ಕೋಟಿ ಜನರು ರೇಷನ್ ಪಡೆದುಕೊಳ್ಳುತ್ತಿದ್ದಾರೆ ತಿಳಿದು ಬಂದಿದೆ.
ಸದ್ಯ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೋ? ಇಲ್ಲವೋ? ಎಂಬುದನ್ನು ಈ ರೀತಿ ಚೆಕ್ ಮಾಡಿ:
ನೀವು ಅದರ ಅಧಿಕೃತ ವೆಬ್ಸೈಟ್ಗೆ ಹೋಗಬೇಕು nfsa.gov.in/Default.aspx ಈ ವೆಬ್ ಸೈಟ್ ಗೆ ಹೋದ ನಂತರ, ನೀವು ಪಡಿತರ ಚೀಟಿಯ ಆಯ್ಕೆಯನ್ನು ಆರಿಸಬೇಕು. ಅಲ್ಲಿ ನೀವು ‘ರಾಜ್ಯ ಪೋರ್ಟಲ್ಗಳಲ್ಲಿ ಪಡಿತರ ಚೀಟಿ ವಿವರಗಳು’ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಪಡಿತರ ಚೀಟಿ ಇರುವ ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿ, ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಬೇಕು ಮತ್ತು ನಂತರ ನಿಮ್ಮ ಬ್ಲಾಕ್ ಅನ್ನು ಸಹ ಆಯ್ಕೆ ಮಾಡಬೇಕು. ನಂತರ ನೀವು ನಿಮ್ಮ ಪಂಚಾಯತ್ ಅನ್ನು ಸಹ ಆಯ್ಕೆ ಮಾಡಬೇಕು. ಈಗ ನೀವು ನಿಮ್ಮ ಪಡಿತರ ಅಂಗಡಿಯ ಹೆಸರು ಮತ್ತು ಪಡಿತರ ಚೀಟಿಯ ಪ್ರಕಾರವನ್ನು ಸಹ ತಿಳಿಸಬೇಕು . ಅಲ್ಲಿ ಒಂದು ಪಟ್ಟಿ ನಿಮ್ಮ ಮುಂದೆ ಕಾಣಿಸಿಕೊಳ್ಳುತ್ತದೆ. ಈ ಪಟ್ಟಿಯಲ್ಲಿ ಪಡಿತರ ಚೀಟಿದಾರರ ಹೆಸರುಗಳಿವೆ. ಈಗ ನೀವು ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಹುಡುಕಬೇಕು. ಹುಡುಕಿದ ಹೆಸರು ಪಟ್ಟಿಯಲ್ಲಿ ಹೆಸರು ಇದ್ದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಸೇರ್ಪಡೆಯಾಗಿದೆ ಅಂತ ಅರ್ಥ. ಆದರೆ ಪಡಿತರ ಚೀಟಿಯಲ್ಲಿ ಹೆಸರು ಇಲ್ಲದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದು ಮಾಡಲಾಗಿದೆ ಅಂತ ಅರ್ಥ.
