Home » Karantaka Rain Alert: ಸೆ.12 ರವರೆಗೆ ಈ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆ- ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Karantaka Rain Alert: ಸೆ.12 ರವರೆಗೆ ಈ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆ- ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

1 comment
Karantaka Rain Alert

Karnataka Rain Alert:ರಾಜ್ಯದಾದ್ಯಂತ ಬಿಸಿಲಿನ ಧಗೆ(Karnataka Weather) ಹೆಚ್ಚಾಗಿದ್ದು, ಮಳೆಗಾಗಿ ಎದುರು ನೋಡುತ್ತಿದ್ದ ಜನತೆಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ.ಕಳೆದ ಕೆಲವು ದಿನಗಳಿಂದ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದ್ದು, ಮತ್ತೆ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಮಳೆಯ(Karntaka Rain alert)ಕುರಿತು ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಬಳಿಕ ಭಾರೀ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಿಂದ ಮೂರು ದಿನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow Alert)ಘೋಷಿಸಲಾಗಿದೆ. ಸೆಪ್ಟಂಬರ್ 5ರಿಂದ ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ವರುಣನ ಅಬ್ಬರವಿರಲಿದೆ.

ಸೆಪ್ಟೆಂಬರ್ 7 ಮತ್ತು 8ರಂದು ಕಲಬುರಗಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟಂಬರ್ 12ರವರೆಗೂ ಮಳೆಯ ಆರ್ಭಟವಿರಲಿದ್ದು, ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳವರೆಗೆ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಕೂಡ ಘೋಷಿಸಲಾಗಿದೆ.

ಇದನ್ನೂ ಓದಿ: Madhya Pradesh: ಪುಸ್ತಕ ಮಾರುತ್ತಿದ್ದ ಮುಸ್ಲಿಂನ ಮೇಲೆ ಹಲ್ಲೆ- ಕಾರಣ ಕೇಳಿದ್ರೆ ನೀವೂ ಮರುಗುತ್ತೀರಾ!!

You may also like

Leave a Comment