Home » SSLC ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗಳಿಗೆ ಇಲಾಖೆ ಸೂಚನೆ

SSLC ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗಳಿಗೆ ಇಲಾಖೆ ಸೂಚನೆ

by Mallika
0 comments

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗು ಅನುದಾನ ರಹಿತ ಶಾಲೆಗಳ ಮುಖ್ಯಸ್ಥರಿಗೆ ತಮ್ಮ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಶಾಲಾ ಹಾಗೂ ಪುನರಾವರ್ತಿತ ಖಾಸಗಿ ಅಭ್ಯರ್ಥಿಗಳು ವಿವರಗಳನ್ನು ಆನ್‌ಲೈನ್‌ ಮೂಲಕ ಅಪ್‌ಲೋಡ್‌ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಪ್ರಸ್ತುತ, ನೋಂದಣಿಯಾದ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಮಂಡಲಿಗೆ ಪಾವತಿಸುವಂತೆ ತಿಳಿಸಿದೆ.

ಮಂಡಲಿ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ತಿಗಳ ಪರೀಕ್ಷಾ ಶುಲ್ಕದ ಚಲನ್‌ ಮುದ್ರಿಸಿಕೊಳ್ಳಲು ನಿಗದಿಪಡಿಸಿದ ದಿನಾಂಕ- 21-12-2022 ರಿಂದ 27-12-2022 ರವರೆಗೆ.
ಚಲನ್ ಮುದ್ರಿಸಿಕೊಂಡು ಬ್ಯಾಂಕ್‌ಗೆ ಪರೀಕ್ಷಾ ಶುಲ್ಕ ಜಮೆ ಮಾಡಲು ನಿಗದಿಪಡಿಸಿದ ದಿನಾಂಕ – 21-12-2022 ರಿಂದ 29-12-2022 ರವರೆಗೆ.
2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನಾರವರ್ತಿತ ಅಭ್ಯರ್ಥಿಗಳ ಪರೀಕ್ಷಾ ಶುಲ್ಕವನ್ನು ಮಂಡಲಿಯ ನೆಫ್ಟ್ ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಪಾವತಿಸಲು ನಿಗದಿಪಡಿಸಿದ ದಿನಾಂಕ- 21-12-2022 ರಿಂದ 29-12-2022 ರವರೆಗೆ.
2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನಾರವರ್ತಿತ ಅಭ್ಯರ್ಥಿಗಳ ಮಂಡಲಿಯ ನೆಫ್ಟ್ ಚಲನ್ ಮೂಲಕ ಶುಲ್ಕ ಪಾವತಿಸಿದ ಮೂಲ ಚಲನ್ ಹಾಗೂ ಸಂಬಂಧಿಸಿದ ಇತರೆ ದಾಖಲೆಗಳನ್ನು ಮಂಡಲಿಗೆ ಸಲ್ಲಿಸಲು ನಿಗದಿಪಡಿಸಿದ ದಿನಾಂಕ – 06-01-2023.

ಮಾರ್ಚ್ /ಏಪ್ರಿಲ್ 2023 ರ ಎಸ್‌ಎಸ್ಎಲ್‌ಸಿ ಮುಖ್ಯ ಪರೀಕ್ಷೆಗೆ ನೋಂದಣಿಯಾಗಿರುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪಾವತಿಸುವ ಬಗ್ಗೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗು ಅನುದಾನ ರಹಿತ ಶಾಲೆಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಸುತ್ತೋಲೆಯನ್ನು ಹೊರಡಿಸಿದೆ.

You may also like

Leave a Comment