Home » ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಚಾಕು, ರಾಡ್, ಕಲ್ಲಿನಿಂದ ಹಲ್ಲೆ

ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಚಾಕು, ರಾಡ್, ಕಲ್ಲಿನಿಂದ ಹಲ್ಲೆ

0 comments

ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದು, ಓರ್ವನ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಬೆಳಗಾವಿಯ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.

ಬೈಕನ್ನು ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಈ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಒಂದು ಕೋಮಿನ ಐದಕ್ಕೂ ಹೆಚ್ಚು ಯುವಕರು ಚಾಕು, ರಾಡ್, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ್ ಬಂಡಿವಡ್ಡರ್‌ಗೆ ಚಾಕುವಿನಿಂದ ಇರಿದಿದ್ದಾರೆ. ರವಿ ಬಂಡಿವಡ್ಡರ್ ಎಂಬ ಯುವಕನ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜಗಳ ಬಿಡಿಸಲೆಂದು ಹೋದ ನಂಜುಡಿ ಸಾಬಣ್ಣ ಬಂಡಿವಡ್ಡರ್ ಎಂಬುವರ ಮೇಲೆಯೂ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೀನ್ ಜಂಗಲಶೇಖ್ ಮತ್ತು ಸಹಚರರಿಂದ ಹಲ್ಲೆ ನಡೆದದಿರುವ ಆರೋಪ ಕೇಳಿಬಂದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆಸ್ಪತ್ರೆ ಬಳಿ ಸಂಬಂಧಿಕರು ಬಂದಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

You may also like

Leave a Comment