Home » ಬೆಳ್ತಂಗಡಿ: ಕೊಯ್ಯೂರಿನಲ್ಲಿ ಜಮೀನು ವಿಷಯಕ್ಕೆ ವ್ಯಕ್ತಿಯ ಮೇಲೆ ಹಲ್ಲೆ, ದೂರು ದಾಖಲು

ಬೆಳ್ತಂಗಡಿ: ಕೊಯ್ಯೂರಿನಲ್ಲಿ ಜಮೀನು ವಿಷಯಕ್ಕೆ ವ್ಯಕ್ತಿಯ ಮೇಲೆ ಹಲ್ಲೆ, ದೂರು ದಾಖಲು

0 comments

ಜಮೀನಿನ ಕುರಿತ ವಿಷಯಕ್ಕಾಗಿ ವ್ಯಕ್ತಿಯೊಬ್ಬರಿಗೆ ಮರದ ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಕೊಯ್ಯೂರು ಗ್ರಾಮದ ಬೀಜದಡಿ ನಿವಾಸಿ ವೆಂಕಪ್ಪ ಗೌಡ (40) ಎಂದು ಗುರುತಿಸಲಾಗಿದೆ. ಪ್ರಮೋದ್ ಎಂಬಾತ ಮರದ ದೊಣ್ಣೆಯಿಂದ ವೆಂಕಪ್ಪ ಅವರಿಗೆ ತಲೆಗೆ ಹೊಡೆದು ಹಲ್ಲೆ ನಡೆಸಿದ್ದಾನೆ.

ಜಮೀನಿನ ವ್ಯಾಜ್ಯಕ್ಕೆ ಕುರಿತು ಆರೋಪಿ ಪ್ರಮೋದ್ ಮನೆಗೆ ಅಕ್ರಮ ಪ್ರವೇಶಗೈದು ಏಕಾಏಕಿ ಮರದ ದೊಣ್ಣೆಯಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ವೆಂಕಪ್ಪ ಗೌಡರ ಬೊಬ್ಬೆ ಕೇಳಿ ಅಕ್ಕಪಕ್ಕದ ಮನೆಯವರು, ಸ್ಥಳೀಯರು ಓಡಿ ಬಂದು ವೆಂಕಪ್ಪ ಗೌಡರನ್ನು ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಕ್ರಿಮಿನಲ್ ಹಿನ್ನೆಲೆ ಹೊಂದಿದ ಆರೋಪಿ ಪ್ರಮೋದ್ ಈ ಹಿಂದೆ ವೆಂಕಪ್ಪ ಗೌಡ ಹಾಗೂ ಅವರ ಸಹೋದರನ ಮೇಲೆ ತಲಾವಾರು ದಾಳಿ ನಡೆಸಿದ ಆರೋಪ ಎದುರಿಸುತ್ತಿದ್ದಾನೆ.

ಬೆಳ್ತಂಗಡಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

You may also like

Leave a Comment