Home » ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಶಾಲಾ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ: ಸಚಿವ ಬಿ ಸಿ ನಾಗೇಶ್

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಶಾಲಾ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ: ಸಚಿವ ಬಿ ಸಿ ನಾಗೇಶ್

0 comments

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ
ಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು ಎಂದು‌ ಬಿ ಸಿ ನಾಗೇಶ್ ಹೇಳಿದ್ದಾರೆ.

“ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ, ಕುರಾನ್ ಮತ್ತು ಇತರ ನೈತಿಕ ಶಿಕ್ಷಣಗಳನ್ನು ಈ ಬಾರಿಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸಲಾಗುವುದು. ಸಮಿತಿಯೊಂದು ಪಠ್ಯಕ್ರಮವನ್ನು ನಿರ್ಧರಿಸಲಿದ್ದು. ಈ ನೈತಿಕ ಶಿಕ್ಷಣದ ಪಠ್ಯಕ್ಕೆ ಪರೀಕ್ಷೆಯಿರುವುದಿಲ್ಲ” ಎಂದು ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಬಿ ಸಿ ನಾಗೇಶ್ ಹೇಳಿದ್ದಾರೆ‌

ಅದು ಕೇವಲ ಒಂದು ಧರ್ಮಕ್ಕೆ ಸೀಮಿತವಾಗುವುದಿಲ್ಲ.
ಎಲ್ಲಾ ಧರ್ಮಗಳ ನೈತಿಕ ಮೌಲ್ಯಗಳನ್ನು ಕಲಿಸುವ
ಪಠ್ಯಗಳನ್ನು ಸೇರಿಸಲಾಗುವುದು ಎಂದು ಶಿಕ್ಷಣ ಸಚಿವ ಹೇಳಿದ್ದಾರೆ.

You may also like

Leave a Comment