Home » Shakti Scheme: ಫ್ರೀ ಎಫೆಕ್ಟ್; ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ‘ ಸ್ಮಾರ್ಟ್ ಕಾರ್ಡ್’ ವಿತರಣೆ – ಸಾರಿಗೆ ಸಚಿವರು ನೀಡಿದ್ರು ಮಹತ್ವದ ಮಾಹಿತಿ!!!

Shakti Scheme: ಫ್ರೀ ಎಫೆಕ್ಟ್; ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ‘ ಸ್ಮಾರ್ಟ್ ಕಾರ್ಡ್’ ವಿತರಣೆ – ಸಾರಿಗೆ ಸಚಿವರು ನೀಡಿದ್ರು ಮಹತ್ವದ ಮಾಹಿತಿ!!!

0 comments
Shakti Scheme

Shakti Scheme: ಕಾಂಗ್ರೆಸ್ ಸರ್ಕಾರದ (Congress Government) 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆ (Shakti Scheme) ಈಗಾಗಲೇ ಜಾರಿಯಾಗಿದೆ. ರಾಜ್ಯದ ಉದ್ದಗಲಕ್ಕೆ ಕರ್ನಾಟಕ ಸಾರಿಗೆಯ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ (Free Bus Service) ಸೌಲಭ್ಯ ರಾಜ್ಯ ಸರ್ಕಾರ ಒದಗಿಸಿದೆ. ಶಕ್ತಿ ಯೋಜನೆಗೆ (Shakthi Scheme) ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗಿದೆ.

ಮಹಿಳೆಯರು ಆಧಾರ್ ಕಾರ್ಡ್ ಅಥವಾ ಇತರೆ ಗುರುತಿನ ಚೀಟಿ ತೋರಿಸಿ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಮುಂದಿನ ದಿನದಲ್ಲಿ ಸ್ಮಾರ್ಟ್ ಕಾರ್ಡ್ ಸಿಗಲಿದೆ ಎಂದು ಹೇಳಲಾಗಿದೆ. ಇದೀಗ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ‘ ಸ್ಮಾರ್ಟ್ ಕಾರ್ಡ್’ ವಿತರಣೆ ಬಗ್ಗೆ ಸಾರಿಗೆ ಸಚಿವರು ಮಹತ್ವದ ಮಾಹಿತಿ ನೀಡಿದ್ದಾರೆ.

ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಅಲ್ಲಿಯತನಕ ಕೂಡಾ ಸ್ಮಾರ್ಟ್ ಕಾರ್ಡ್ ಇಲ್ಲದೆ ಪ್ರಯಾಣಿಸಬಹುದಾಗಿದೆ. ಆದರೆ, ಶಕ್ತಿ ಯೋಜನೆ ಜಾರಿಯಾಗಿ ಎರಡು ತಿಂಗಳು ಕಳೆದರೂ ಇನ್ನೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿಲ್ಲ. ಸದ್ಯಕ್ಕೆ ಸ್ಮಾರ್ಟ್ ಕಾರ್ಡ್ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಅವರು ಪ್ರತಿಕ್ರಿಯೆ ನೀಡಿದ್ದು, ಸದ್ಯಕ್ಕೆ ಸ್ಮಾರ್ಟ್‌ ಕಾರ್ಡ್ ವಿತರಣೆ ಬಗ್ಗೆ ಚರ್ಚೆ ಆಗಿಲ್ಲ. ಈವರೆಗೆ ಏನೂ ಸಮಸ್ಯೆಯಾಗಿಲ್ಲ. ಚೆನ್ನಾಗಿ ನಡೆದುಕೊಂಡು ಹೋಗುತ್ತಿದೆ ಸಮಸ್ಯೆಯಾದ್ರೆ ನೋಡೋಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: Nail Shapes: ನಿಮ್ಮ ಕೈಯಲ್ಲಿರುವ ಉಗುರಿನ ಆಕಾರದಲ್ಲಿ ಅಡಗಿದೆ ನಿಮ್ಮ ಭವಿಷ್ಯದ ಸೀಕ್ರೇಟ್‌!

You may also like

Leave a Comment