Answer Paper Viral: ಮೊದಲೆಲ್ಲಾ ಎಕ್ಸಾಮ್ ಎಂದರೆ ಎಲ್ಲರಲ್ಲೂ ಭಯ, ಪ್ರಾಮಾಣಿಕತೆ ಇತ್ತು. ಆದರೆ ಈಗ ವಿದ್ಯಾರ್ಥಿಗಳಿಗೆ ಎಕ್ಸಾಮ್ ಎಂದರೆ ಹುಡುಗಾಟ ಆಗಿ ಬಿಟ್ಟಿದೆ. ಹೇಗಾದರೂ ಪಾಸ್ ಆದರಾಯಿತು ಎಂಬ ಅಸಡ್ಡೆ ಬಹುತೇಕರಲ್ಲಿ ಕಾಣಬಹುದು.
ಅದಕ್ಕೆ ಉದಾಹರಣೆ ಎಂಬಂತೆ ವಿದ್ಯಾರ್ಥಿಯೊಬ್ಬ ತಾನು ಪ್ರೀತಿಯಲ್ಲಿ ಬಿದ್ದ ಕಾರಣ ಪರೀಕ್ಷೆಗೆ ಓದಲು ಸಾಧ್ಯವಾಗಿಲ್ಲ ಎಂದು ಉತ್ತರ ಪತ್ರಿಕೆಯಲ್ಲಿ (Answer Paper) ಬರೆದಿಟ್ಟು ಉತ್ತೀರ್ಣಗೊಳಿಸುವಂತೆ ಮನವಿ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಬೋರ್ಡ್ ಪರೀಕ್ಷೆ ಮೌಲ್ಯ ಮಾಪನದ ವೇಳೆ ಬೆಳಕಿಗೆ ಬಂದಿದೆ.
ಸಿಎಂ ಯೋಗಿ ಆದಿತ್ಯನಾಥ್ ಅವರ ಆದೇಶದಂತೆ, ಉತ್ತರ ಪ್ರದೇಶದ ಶಿಕ್ಷಣ ಕ್ಷೇತ್ರದಲ್ಲಿ ಕಟ್ಟುನಿಟ್ಟಿನ ಪರೀಕ್ಷೆ ನಡೆಸಿದ್ದು, ಲಕ್ಷ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಇನ್ನು ಕೆಲವು ವಿದ್ಯಾರ್ಥಿಗಳು ವಿಚಿತ್ರ ಉತ್ತರಗಳನ್ನು ಬರೆದು ಪರೀಕ್ಷೆಯಲ್ಲಿ ಉತೀರ್ಣ ಮಾಡಲು ಕೇಳಿಕೊಂಡಿದ್ದಾರೆ. ಕೆಲ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯೊಂದಿಗೆ ಹಣವನ್ನು ಇಟ್ಟು ಉತೀರ್ಣ ಮಾಡಲು ಲಂಚ ನೀಡಿದ್ದಾರೆ. ಇನ್ನು ಕೆಲವರು ತಮ್ಮ ಫೋನ್ ನಂಬರ್ ಬರೆದಿಟ್ಟಿರುವುದು ಬೆಳಕಿಗೆ ಬಂದಿದೆ.
ಇನ್ನೊಬ್ಬ ಈ ಬಾರಿ ಪರೀಕ್ಷೆಯಲ್ಲಿ ನಾನು ಅನುತ್ತೀರ್ಣವಾದರೆ ತಂದೆ ತನ್ನನ್ನು ಕೊಲೆ ಮಾಡುವುದಾಗಿ ಮತ್ತೊಬ್ಬ ವಿದ್ಯಾರ್ಥಿ ಬರೆದಿದ್ದಾನೆ. ಇನ್ನು ಕೆಲವರು ಸೆಂಟಿಮೆಂಟ್ ಡೈಲಾಗ್ ಬರೆದು ಪಾಸ್ ಮಾಡಲು ವಿನಂತಿ ಮಾಡಿದ್ದಾರೆ.
ವಿಶೇಷ ಎಂದರೆ ರಸಾಯನಶಾಸ್ತ್ರ ಪರೀಕ್ಷೆಯಲ್ಲಿ ತನ್ನ ಪ್ರೇಮದ ಬಗ್ಗೆ ಬರೆದಿದ್ದು, ತಾನು ಪ್ರೀತಿ ಮಾಡುವ ಯುವತಿಯ ಹೆಸರು ಹಾಗೂ ಹೃದಯದ ಚಿಹ್ನೆ ಬರೆದಿಟ್ಟಿದ್ದಾನೆ.
ಸದ್ಯ ಈ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪತ್ರಿಕೆಯನ್ನು ಮೌಲ್ಯ ಮಾಪನ ಮಾಡಿದ ಶಿಕ್ಷಕರೊಬ್ಬರು ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರ ಅನುಕಂಪ ಪಡೆಯಲು ಹಲವಾರು ರೀತಿ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಸದ್ಯ ಈ ರೀತಿ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಗಳು, ಮೌಲ್ಯ ಮಾಪಕರಲ್ಲಿ ಪಾಸ್ ಮಾಡುವಂತೆ ಆಮಿಷ ಒಡ್ಡಿರುವುದು ಎಲ್ಲೆಡೆ ವೈರಲ್(viral) ಆಗಿದೆ.
ಇದನ್ನೂ ಓದಿ: ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ, ಕೇವಲ 820 ರೂ. ಸಿಗಲಿದೆ ಗ್ಯಾಸ್ !
