Home » Heart Attack: ಹೃದಯಾಘಾತಕ್ಕೆ 7 ನೇ ತರಗತಿ ವಿದ್ಯಾರ್ಥಿನಿ ಸಾವು!!!

Heart Attack: ಹೃದಯಾಘಾತಕ್ಕೆ 7 ನೇ ತರಗತಿ ವಿದ್ಯಾರ್ಥಿನಿ ಸಾವು!!!

0 comments
Heart Attack

Heart Attack: ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬೆಳಗ್ಗೆ ಶಾಲೆಗೆಂದು ತೆರಳುತ್ತಿದ್ದ ಸಮಯದಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ ಎಂದು ವರದಿಯಾಗಿದೆ. ಸೃಷ್ಟಿ (13) ಎಂಬಾಕೆಯೇ ಮೃತಪಟ್ಟ ಬಾಲಕಿ. ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಬಾಲಕಿ ಕಲಿಯುತ್ತಿದ್ದು, ಶಾಲೆಗೆ ತೆರಳುತ್ತಿದ್ದಾಗ ಹಠಾತ್‌ ಆಗಿ ಕುಸಿದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಆಕೆ ಮೃತಪಟ್ಟಿದ್ದಾಳೆ. ನಂತರ ಸರಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತವಾಗಿದೆ ಎಂದು ಹೇಳಿದ್ದಾರೆ.

ಸೃಷ್ಟಿಗೆ ಆಗಾಗ ತಲೆ ಸುತ್ತುವ ಸಮಸ್ಯೆ ಇತ್ತು ಎಂದು ವರದಿಯಾಗಿದೆ. ಚಿಕ್ಕ ಮಕ್ಕಳಿಗೆ ತಲೆ ಸುತ್ತುವ ಸಮಸ್ಯೆ ಇದ್ದರೆ ಕೂಡಲೇ ಅವರನ್ನು ತಜ್ಞ ವೈದ್ಯರಿಗೆ ತೋರಿಸಬೇಕು, ಇದರಿಂದ ಮುಂದಾಗುವ ಅನಾಹುತ ತಪ್ಪಿಸಬಹುದು ಎಂದು ತಜ್ಞ ವೈದ್ಯರು ಸಲಹೆ ನೀಡುತ್ತಾರೆ.

ಇದನ್ನು ಓದಿ: Gruhalakshmi Scheme: ಗೃಹಲಕ್ಷ್ಮೀ 4ನೇ ಕಂತಿನ ಹಣ ಬಿಡುಗಡೆ- ಆದ್ರೆ ಈ ಜಿಲ್ಲೆಯವರಿಗೆ ಮಾತ್ರ !!

You may also like

Leave a Comment