Home » ಮಂಗಳೂರು:ಗುರುಪುರ-ಕೈಕಂಬದ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ ಪಲ್ಟಿ!! ಪ್ರಯಾಣಿಕರಿಗೆ ಗಾಯ

ಮಂಗಳೂರು:ಗುರುಪುರ-ಕೈಕಂಬದ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ ಪಲ್ಟಿ!! ಪ್ರಯಾಣಿಕರಿಗೆ ಗಾಯ

0 comments

ಮಂಗಳೂರು:ನಗರದ ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯ ಗುರುಪುರ-ಕೈಕಂಬ ಪೊಳಲಿ ದ್ವಾರದ ಬಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆಯು ಇಂದು ಸಂಜೆ ನಡೆದಿದೆ.

ಕಿನ್ನಿಗೋಳಿ ಕಡೆಯಿಂದ ಕೈಕಂಬ ಪೊಳಲಿ ದ್ವಾರದ ಮಾರ್ಗವಾಗಿ ಬಿಸಿರೋಡ್ ಕಡೆಗೆ ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ಬಸ್ ದ್ವಾರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿತ್ತು.

ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಇನ್ನೂ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.ಕೂಡಲೇ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದರು.

You may also like

Leave a Comment