2
ರಾಜ್ಯದಲ್ಲಿ ಕೊರೊನಾ ವೈರಸ್ ನಾಲ್ಕನೇ ಅಲೆ ಆತಂಕ ಎದುರಾಗಿದ್ದು, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವಂತೆ ಬಿಬಿಎಂಪಿ ವಿಶೇಷ ಆಯುಕ್ತರು ಹೇಳಿದ್ದಾರೆ.
ಕರ್ನಾಟಕದ ಇಡೀ ರಾಜ್ಯದಲ್ಲಿ 301 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಪಕ್ಕಾ ಆಗಿದ್ದರೆ, ಅದರಲ್ಲಿ 291 ಮಂದಿ ಸೋಂಕಿತರು ಬೆಂಗಳೂರಿನವರೇ ಆಗಿದ್ದಾರೆ. ಹಾಗಾಗಿ ಇನ್ನು ಬೆಂಗಳೂರಿನ ಜನರಿಗೆ ಮಾಸ್ಕ್ ಧರಿಸುವುದು ಕಡ್ಡಾಯ
ಸಿಲಿಕಾನ್ ಸಿಟಿಯಲ್ಲಿ ಪ್ರತಿನಿತ್ಯ 220ಕ್ಕೂ ಹೆಚ್ಚು ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ.ಹೀಗಾಗಿ ನಗರದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಬಗ್ಗೆ ನಿಗಾ ವಹಿಸುವಂತೆ ಮಾರ್ಷಲ್ ಗಳಿಗೆ ಸೂಚನೆ ನೀಡಲಾಗಿದೆ.
