Home » ಮೇಕೆದಾಟು ಯೋಜನೆ ವಿವಾದ : ವಿಚಾರಣೆಯನ್ನು ಆಗಸ್ಟ್ 10 ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಮೇಕೆದಾಟು ಯೋಜನೆ ವಿವಾದ : ವಿಚಾರಣೆಯನ್ನು ಆಗಸ್ಟ್ 10 ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

0 comments

ನವದೆಹಲಿ : ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆದಿದ್ದು, ಈ ವೇಳೆ ಲಿಖಿತ ದಾಖಲೆಗಳನ್ನು ಸಲ್ಲಿಸಿದ್ದರಿಂದ ಅರ್ಜಿ ವಿಚಾರಣೆಯನ್ನು ಆಗಸ್ಟ್ 10 ಕ್ಕೆ ಮುಂದೂಡಿದೆ.

ತಮಿಳುನಾಡು ಸರ್ಕಾರವು ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ಸಂಬಂಧ ಇಂದಿನ ವಿಚಾರಣೆ ವೇಳೆ ಹೆಚ್ಚುವರಿ ಲಿಖಿತ ದಾಖಲೆಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತು. ಈ ಹಿನ್ನೆಲೆಯಲ್ಲಿ ಇದಕ್ಕೆ ಉತ್ತರಿಸಲು ಸಮಯ ಬೇಕು ಎಂದು ಕರ್ನಾಟಕ ಪರ ವಕೀಲ ಶಾಮ್ ದಿವಾನ್ ವಾದ ಮಂಡಿಸಿದ್ದಾರೆ.

ಹೀಗಾಗಿ, ಮೇಕೆದಾಟು ಅರ್ಜಿ ವಿಚಾರಣೆ ಹಂತದಲ್ಲಿದ್ದು, ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ಸಧ್ಯಕ್ಕೆ ಚರ್ಚೆಯಾಗಬಾರದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಆಗಸ್ಟ್ 10ಕ್ಕೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

You may also like

Leave a Comment