Home » ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಎಚ್ಚರಿಕೆ

ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಎಚ್ಚರಿಕೆ

by Praveen Chennavara
0 comments

ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಬಹಿರಂಗ ಹೇಳಿಕೆ‌‌ ನೀಡುತ್ತಿರುವ ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಬಳಿಕ ಮಾಧ್ಯಮದ ಜತೆ ಮಾತನಾಡಿದ ನಳಿನ್, ಶಾಸಕರು ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಹಾಗಿಲ್ಲ. ಮಾಧ್ಯಮಗಳಿಗೆ ಹೇಳಿಕೆ ನೀಡಿದವರ ಜೊತೆ ಮಾತನಾಡಲಾಗುವುದು. ಕೆಲವರಿಗೆ ನೋಟಿಸ್ ನೀಡಲು ಚಿಂತಿಸಿದ್ದೇವೆ. ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ ಎಂದರು.

ಸಂಪುಟ ರಚನೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಸಿಎಂ‌ ಜತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತದೆ. ಹೀಗಾಗಿ ಶಾಸಕರು ಬಹಿರಂಗ ಹೇಳಿಕೆ ನೀಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ

You may also like

Leave a Comment