BJP- JDS : 2024ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ತಯಾರಿಯೂ ಭರ್ಜರಿ ಜೋರಾಗಿದೆ. ಲೋಕಸಮರದಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್(Congress) ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್(BJP-JDS) ಮುಂದಾಗಿವೆ. ಎಲ್ಲರೂ ನಿರೀಕ್ಷಿಸಿದಂತೆ ಈ ಎರಡೂ ಪಕ್ಷಗಳು ಮೈತ್ರಿಗೆ ಸನ್ನಧವಾಗಿದ್ದು, ಕ್ಷೇತ್ರ ಹಂಚಿಕೆ ಕೂಡ ನಡೆದಿದೆ ಎನ್ನಲಾಗಿದೆ. ಹಾಗಿದ್ರೆ ಬಿಜೆಪಿ ತೆಕ್ಕೆಗೆ ಬಂದ, ಜೆಡಿಎಸ್ ಜೇಬು ಸೇರಿದ ಕ್ಷತ್ರಗಳು ಯಾವುವು.
ಹೌದು, 2024 ರ ಲೋಕಸಭಾ ಚುನಾವಣೆಗೆ(Parliament election)ಬಿಜೆಪಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ(Yadiyurappa) ಶುಕ್ರವಾರ ಹೇಳಿದ್ದಾರೆ. ನಾಡಿನ ಜನ ನಿರೀಕ್ಷಿಸಿದಂತೆ ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ಮೈತ್ರಿ ಮಾಡಿಕೊಂಡಿವೆ. ಎರಡೂ ಪಕ್ಷಗಳ ನಾಯಕರು ಇದಕ್ಕೆ ಅಧಿಕೃತ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ (Lokasabha Election) ಈಗಿರುವ ಸ್ಥಾನಗಳನ್ನು ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ರಣತಂತ್ರ ರೂಪಿಸುತ್ತಿದ್ದರೆ, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಜೆಡಿಎಸ್ ಹೆಣಗಾಡುತ್ತಿದೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಗೆ ಮೈತ್ರಿ ಅನಿವಾರ್ಯವಾಗಿದೆ. ಇನ್ನೂ ಎರಡೂ ಪಕ್ಷಗಳ ನಾಯಕರ ಸಭೆ ನಡೆದಿದ್ದು, ಮೈತ್ರಿ ಬಗ್ಗೆ, ಚುನಾವಣೆ ಸ್ಪರ್ಧೆ ಬಗ್ಗೆ ಚರ್ಚೆಗಳಾಗಿವೆ. ಅಲ್ಲದೆ ಕ್ಷೇತ್ರ ಹಂಚಿಕೆಯೂ ನಡೆದಿದೆ ಎನ್ನಲಾಗಿದೆ. ಅಲ್ಲದೆ
ಯಾರಿಗೆ ಎಷ್ಟು ಕ್ಷೇತ್ರ?
ಇತ್ತೀಚಿಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು (HD Devegowda) ಮತ್ತು ಕೇಂದ್ರ ಸಚಿವ ಅಮಿತ್ ಶಾ (Amit Shah) ದೆಹಲಿಯಲ್ಲಿ ಸಭೆ ಸೇರಿ ಮೈತ್ರಿ ಸೂತ್ರ ಹೆಣೆದಿದ್ದಾರೆ. ಆದರೆ ಸೀಟು ಹಂಚಿಕೆ ಇನ್ನೂ ಅಂತಿಮಗೊಂಡಿಲ್ಲ. ಬಹುತೇಕ 24+4 ಸೀಟು ಹಂಚಿಕೆ ಸೂತ್ರವೇ ಫೈನಲ್ ಆಗುವ ಸಾಧ್ಯತೆಗಳಿವೆ. ಎಲ್ಲಾ ಸೂತ್ರಗಳಿಗೆ ಒಪ್ಪಿಗೆ ಸಿಕ್ಕಿದರೆ ಸೆಪ್ಟೆಂಬರ್ 10ಕ್ಕೆ ದೋಸ್ತಿ ಡೀಲ್ ಅಧಿಕೃತವಾಗಿ ಪ್ರಕಟವಾಗಬಹುದು ಎನ್ನಲಾಗಿದೆ. ಅಲ್ಲದೆ ಮೈತ್ರಿಯ ಗುಟ್ಟನ್ನು ರಟ್ಟು ಮಾಡಿದ ಯಡಿಯೂರಪ್ಪ ಅವರು ಬಿಜೆಪಿ ಜೆಡಿಎಸ್ ಮೈತ್ರಿಗೆ ಪ್ರಧಾನಿ ಮೋದಿ ಒಪ್ಪಿಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಿಜೆಪಿ ಮುಂದಾಗಿದೆ ಎಂದಿದ್ದಾರೆ. ಆದರೆ ಯಾವ ಕ್ಷೇತ್ರಗಳು ಎಂದು ಇನ್ನೂ ತಿಳಿದುಬಂದಿಲ್ಲ.
ಜೆಡಿಎಸ್-ಬಿಜೆಪಿ ಮೈತ್ರಿ ಸೂತ್ರ ಏನು?
7+21 ಸೀಟು ಹಂಚಿಕೆ ಸೂತ್ರವನ್ನು ಜೆಡಿಎಸ್ ಮುಂದಿಟ್ಟಿದೆ. ಹಾಸನ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರಕ್ಕೆ ಬೇಡಿಕೆ ಇಟ್ಟಿದೆ. ಆದರೆ 24+4 ಸೀಟು ಹಂಚಿಕೆ ಸೂತ್ರವನ್ನು ಬಿಜೆಪಿ ಮಾಡಿದೆ. ಹಾಸನ, ತುಮಕೂರು, ಮಂಡ್ಯ ಬಿಟ್ಟು ಕೊಡಲು ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಜೊತೆಗೆ ಬೆಂಗಳೂರು ಗ್ರಾಮಾಂತರ ಅಥವಾ ಚಿಕ್ಕಬಳ್ಳಾಪುರ ಪೈಕಿ ಒಂದು ಕ್ಷೇತ್ರ ಜೆಡಿಎಸ್‍ಗೆ ಸಿಗುವ ಸಾಧ್ಯತೆಯಿದೆ.
ಮಂಡ್ಯ ಯಾರಿಗೆ? ಬಿಜೆಪಿಗೋ? ಜೆಡಿಎಸ್‌ಗೋ?
ಮಂಡ್ಯದ ಬಗ್ಗೆ ಬಿಜೆಪಿ ಇನ್ನು ಸ್ಪಷ್ಟ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಡುತ್ತೇವೆ ಎಂದು ಬಿಜೆಪಿ ಮಾತು ನೀಡಿರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಇಲ್ಲ ಎಂದರೆ ಸುಮಲತಾ ಅಂಬರೀಶ್ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರವನ್ನು ನೀಡುವ ಸಾಧ್ಯತೆ ಇದೆ. ಆದರೆ, ಅವರು ಮಂಡ್ಯ ಬಿಟ್ಟು ಹೋಗುವುದಿಲ್ಲ ಎಂದು ಪಟ್ಟು ಹಿಡಿದರೆ ಸುಮಲತಾ ಅವರನ್ನೇ ಜೆಡಿಎಸ್ ಚಿಹ್ನೆಯಲ್ಲಿ ಕಣಕ್ಕಿಳಿಸುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಆದರೆ, ಸದ್ಯಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಮೈತ್ರಿ ಮಾತುಕತೆಯಲ್ಲಿ ಕಾದು ನೋಡುವ ತಂತ್ರ ಅನುಸರಿಸಲಾಗಿದೆ
ದೇವೇಗೌಡರು ಏನಂದ್ರು?
ಇನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ನನಗೆ ಖುಷಿ ತಂದಿದೆ. ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಉಭಯ ನಾಯಕರು ಈಗಾಗಲೇ 4 ಸ್ಥಾನ ಅಂತಿಮಗೊಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
