Madhu Bangarappa: ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆದ್ದು ಬೀಗಿದ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದು, ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ತರ ಬದಲಾವಣೆಯ ತರಲು ಮುಂದಾಗಿದೆ.
ಕಾಂಗ್ರೆಸ್ ಅಧಿಕಾರ ಕೈ ಹಿಡಿದ ಬೆನ್ನಲ್ಲೆಮುಖ್ಯಮಂತ್ರಿ ಶಾಲಾ ಪಠ್ಯ ಪರಿಷ್ಕರಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು ಈ ಬೆನ್ನಲ್ಲೆ ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸೂಕ್ತ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಮಕ್ಕಳಿಗೆ ಪಠ್ಯದ ಮೂಲಕ ಕೆಟ್ಟ ವಿಚಾರವನ್ನು ತುಂಬುವ ಯಾವುದೇ ಪಠ್ಯ ಇದ್ದರೂ ಅವುಗಳನ್ನ ಬದಲಾವಣೆಯನ್ನು ಮಾಡುತ್ತೇವೆ. ಈಗಾಗಲೇ ಪರಿಷ್ಕರಣೆ ಪ್ರಕ್ರಿಯೆ ಶುರುವಾಗಿದ್ದು, ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದಾರೆ. ಮುಂದಿನ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ. ಅಲ್ಲದೇ ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ:RBI Recruitment 2023: ಆರ್‌ಬಿಐನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!
