High Court : ಚಾಲ್ತಿಯಲ್ಲಿರುವ ಶೇ. 50ರ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ, ಆದ್ರೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಕೂಡದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿದೆ.
ಹೌದು, “ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಮೀಸಲಾತಿ ಹೆಚ್ಚಿಸಿರುವುದರ (ಶೇ.56) ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಕೂಡದು” ಎಂದು ಪುನರುಚ್ಚರಿಸಿರುವ ಕರ್ನಾಟಕ ಹೈಕೋರ್ಟ್, ಮಧ್ಯಂತರ ವ್ಯವಸ್ಥೆಗೆ ಸಂಬಂಧಿಸಿದಂತೆ ಮತ್ತು ಅಗತ್ಯಬಿದ್ದರೆ ಸೂಕ್ತ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮಂಗಳವಾರ ಅನುಮತಿಸಿದೆ.
ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಮೀಸಲಾತಿ ಪ್ರಮಾಣವನ್ನು ಶೇ.15ರಿಂದ 17 ಪರಿಶಿಷ್ಟ ಪಂಗಡದ ಪಂಗಡದ ಮೀಸಲಾತಿಯನ್ನು ಮೀಸಲ ಶೇ3 ರಿಂದ ಶೇ.7ರ ವರೆಗೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಕರ್ನಾಟಕ ಪ.ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ 2022ರ ಜಾರಿಗೊಳಿಸಿತ್ತು. ಈ ಕಾಯ್ದೆ ಸಂವಿಧಾನಬಾಹಿರವಾಗಿದೆ ಎಂದು ಆಕ್ಷೇಪಿಸಿ ಡಾ.ಅಂಬೇಡ್ಕರ್ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕೋರಿಗೆ ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾ.ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠ ಈ ಬಗ್ಗೆ ವಿಚಾರಣೆ ನಡೆಸಿದೆ.
ಸರ್ಕಾರದ ಪರ ಅಡ್ವೋಕೇಟ್ ಜನರಲ್ ಅವರು ಶೇಕಡ 50ರ ಮೀಸಲಾತಿ ಆಧರಿಸಿ ಹಲವು ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದರೆ, ಮೀಸಲಾತಿ ಹೆಚ್ಚಿರುವುದರ ಅನುಸಾರ ಹೊಸದಾಗಿ ಯಾವುದೇ ನೇಮಕಾತಿ ಅಥವಾ ಬಡ್ತಿ ನೀಡುವಂತಿಲ್ಲ ಎಂದು 2025 ರ ನವೆಂಬರ್ 27ರಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಹೀಗಾಗಿ ಅರ್ಜಿಗಳನ್ನು ನ್ಯಾಯಾಲಯ ನಿರ್ಧರಿಸುವವರೆಗೆ ಹೆಚ್ಚುವರಿ ಶೇಕಡ 6 ಮೀಸಲಾತಿ ಅನ್ವಯಿಸುವುದಿಲ್ಲ. ಹೈಕೋರ್ಟ್ ಆದೇಶ ಜಾರಿಯಲ್ಲಿರುವುದರಿಂದ ಶೇಕಡ 50ರ ಮೀಸಲಾತಿ ಅನುಸಾರವೇ ನೇಮಕಾತಿ ಪ್ರಕ್ರಿಯೆ ಮುಂದುವರೆಸಿ ಆದೇಶ ವಿತರಿಸಲಾಗುವುದು. ಉಳಿದ ಶೇಕಡ 6ಕ್ಕೆ ನ್ಯಾಯಾಲಯ ನಿರ್ಧಾರ ಮಾಡಿದ ನಂತರ ಆದೇಶ ನೀಡಲಾಗುವುದು. ಇದಕ್ಕೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಆಗ ನ್ಯಾಯ ಪೀಠ ಸರ್ಕಾರ ಈ ಕುರಿತು ಸೂಕ್ತ ಅರ್ಜಿ ಸಲ್ಲಿಸಿದರೆ ಪರಿಶೀಲಿಸುವುದಾಗಿ ಹೇಳಿ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದೆ.













