Home » ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ | ಕಠಿಣ ಕ್ರಮಕ್ಕೆ ಕಡಬ ಪತ್ರಕರ್ತರ ಸಂಘದಿಂದ ಸರಕಾರಕ್ಕೆ ಮನವಿ

ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ | ಕಠಿಣ ಕ್ರಮಕ್ಕೆ ಕಡಬ ಪತ್ರಕರ್ತರ ಸಂಘದಿಂದ ಸರಕಾರಕ್ಕೆ ಮನವಿ

by Praveen Chennavara
0 comments

ಕಡಬ: ಪತ್ರಕರ್ತರ ಮೇಲಿನ ಹಲ್ಲೆ ವಿಚಾರದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಡಬ ತಾಲೂಕು ಪತ್ರಕರ್ತರ ಸಂಘವು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ಮಂಗಳೂರಿನಲ್ಲಿ ನ.22 ರಂದು ಪಬ್ಲಿಕ್ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪತ್ರಿಕಾ ಮತ್ತು ಟಿವಿ ಮಾಧ್ಯಮ ವರದಿಗಾರರ ಮೇಲೆ ನಿರಂತರ ಹಲ್ಲೆ ಪ್ರಕರಣಗಳು ನಡೆಯುತ್ತಿದ್ದು, ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ತಹಶೀಲ್ದಾರ್ ಅನಂತ ಶಂಕರ್ ಮನವಿ ಸ್ವೀಕರಿಸಿದರು. ಮನವಿ ನೀಡುವ ಸಂದರ್ಭ ಕಡಬ ತಾಲೂಕು ಪತ್ರಕರ್ತರ ಸಂಘದದ ಅಧ್ಯಕ್ಷ ನಾಗರಾಜ್ ಎನ್.ಕೆ , ಕಾರ್ಯದರ್ಶಿ ವಿಜಯ ಕುಮಾರ್ ಕಡಬ,ಮಾಜಿ ಅಧ್ಯಕ್ಷ ಬಾಲಕೃಷ್ಣ ಕೊಯಿಲ ಉಪಸ್ಥಿತರಿದ್ದರು.

You may also like

Leave a Comment