Home » ಪತ್ರಕರ್ತನ ಮೇಲೆ ಹಲ್ಲೆದ.ಕ. ಪತ್ರಕರ್ತರ ಸಂಘದಿಂದ ಪೊಲೀಸ್ ಆಯುಕ್ತರಿಗೆ ಮನವಿ

ಪತ್ರಕರ್ತನ ಮೇಲೆ ಹಲ್ಲೆ
ದ.ಕ. ಪತ್ರಕರ್ತರ ಸಂಘದಿಂದ ಪೊಲೀಸ್ ಆಯುಕ್ತರಿಗೆ ಮನವಿ

by Praveen Chennavara
0 comments

ಮಂಗಳೂರು, ನ. 23: ಖಾಸಗಿ ಟಿವಿ ವಾಹನಿಯೊಂದರ ಪತ್ರಕರ್ತರ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಇಂದು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಪತ್ರವನ್ನು ಪತ್ರಕರ್ತರ ನಿಯೋಗವು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಸಲ್ಲಿಸಿತು. ಮನವಿಗೆ ಸ್ಪಂದಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಈ ಬಗ್ಗೆ ಪ್ರತಿ ದೂರು ಕೂಡಾ ಠಾಣೆಗೆ ಸಲ್ಲಿಕೆಯಾಗಿದೆ ಎಂದರು.
ಮನವಿ ಸಲ್ಲಿಸಿದ ನಿಯೋಗದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ‌ ಅಡ್ಕಸ್ಥಳ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್,ಪದಾಧಿಕಾರಿಗಳಾದ ಅನ್ಸಾರ್ ಇನೋಳಿ, ಆತ್ಮಭೂಷಣ್ ಭಟ್, ಭಾಸ್ಕರ ರೈ ಕಟ್ಟ, ವಿಜಯ್ ಪಡು, ದಯಾನಂದ‌ ಕುಕ್ಕಾಜೆ, ರಾಜೇಶ್ ಪೂಜಾರಿ, ಸೇರಿದಂತೆ ಇತರ ಪದಾಧಿಕಾರಿಗಳು, ಪತ್ರಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.

You may also like

Leave a Comment