Home » Pavithra gowda: ಕೋರ್ಟ್‌ ಆದೇಶವಿದ್ರೂ ಪವಿತ್ರಾ ಗೌಡಗೆ ಮನೆಯೂಟ ಇಲ್ಲ!

Pavithra gowda: ಕೋರ್ಟ್‌ ಆದೇಶವಿದ್ರೂ ಪವಿತ್ರಾ ಗೌಡಗೆ ಮನೆಯೂಟ ಇಲ್ಲ!

0 comments
Darshan-Pavithra Gowda

Pavithra gowda,: ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ (Pavithra Gowda) ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ.

ಜೈಲಿನಲ್ಲಿ (Jail) ವಿಚಾರಣಾಧೀನ ಕೈದಿಗಳಿಗೆ ಈ ರೀತಿಯಲ್ಲಿ ಮನೆ ಊಟವನ್ನು ನೀಡಿದರೆ ಮುಂದೆ ಎಲ್ಲಾ ಆರೋಪಿಗಳು ಇದೇ ಆದೇಶದ ಮೇಲೆ ಮನೆ ಊಟವನ್ನು ಕೇಳುವ ಸಾಧ್ಯತೆ ಇರುವುದರಿಂದ ಮನೆ ಊಟ ನೀಡದೇ ಇರಲು ಜೈಲಾಧಿಕಾರಿಗಳು ಮುಂದಾಗಿದ್ದಾರೆ.ಮನೆ ಊಟ ಬಂದರೆ ಪರಿಶೀಲನೆ ಮಾಡಿದ ಬಳಿಕ ಜೈಲಿನ ಒಳಗೆ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ಪ್ರತ್ಯೇಕವಾಗಿ ತಂಡ ಬೇಕಾಗುತ್ತದೆ. ಪರಪ್ಪನ ಅಗ್ರಹಾರದಲ್ಲಿ ಇರುವ 3 ಸಾವಿರ ಆರೋಪಿಗಳು ಇದೇ ಆದೇಶದ ಮೇಲೆ ಅರ್ಜಿ ಹಾಕಿದರೆ ಕಷ್ಟ ಆಗುತ್ತದೆ. ಹೀಗಾಗಿ ಮನೆ ಊಟ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲು ಕಾರಾಗೃಹ ಇಲಾಖೆ ನಿರ್ಧಾರ ಮಾಡಿದೆ.

You may also like