Home » Vishwaprasanna Theertha Swamiji:ಯತೀಂದ್ರ ಹೇಳಿಕೆ ವಿರುದ್ಧ ಪೇಜಾವರ ಶ್ರೀ ತೀಕ್ಷ್ಣ ಪ್ರತಿಕ್ರಿಯೆ!!!

Vishwaprasanna Theertha Swamiji:ಯತೀಂದ್ರ ಹೇಳಿಕೆ ವಿರುದ್ಧ ಪೇಜಾವರ ಶ್ರೀ ತೀಕ್ಷ್ಣ ಪ್ರತಿಕ್ರಿಯೆ!!!

1 comment
Vishwaprasanna Theertha Swamiji

Vishwaprasanna Theertha Swamiji: ಬಿಜೆಪಿ ಆರ್‌ಎಸ್‌ಎಸ್‌ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರ ಹೇಳಿಕೆಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಭಾರತವನ್ನು ಹಿಂದೂರಾಷ್ಟ್ರ ಮಾಡಿದರೆ ಪಾಕಿಸ್ತಾನ ಮಾಡಲು ಯಾರೋ ಸಿದ್ಧತೆ ನಡೆಸುತ್ತಿದ್ದಾರೋ ಏನೋ. ಅಂತಹ ಸಿದ್ಧತೆ ಇಲ್ಲಿ ನಡೆಯುತ್ತಿದೆ ಎಂಬುದರ ಮುನ್ಸೂಚನೆ ಕೊಡುತ್ತಿದ್ದಾರೆ ಅವರು. ಅವರ ಹೇಳಿಕೆ ಸರಿಯಲ್ಲ. ಭಾರತ ಹಿಂದಿನಿಂದಲೂ ಹಿಂದೂ ರಾಷ್ಟ್ರವಾಗಿ ಇದ್ದು, ಜಾತಿ ಧರ್ಮ ಪಂಗಡ ಎಂದು ಮೀಸಲಿರದೆ ಎಲ್ಲರನ್ನ ಅಪ್ಪಿ ಒಪ್ಪಿಕೊಂಡ ದೇಶ’ ಎಂದು ಶ್ರೀಗಳು ಹೇಳಿದ್ದಾರೆ ಎಂದು ಟಿವಿ 9 ಕನ್ನಡ ವರದಿ ಮಾಡಿದೆ.

ಅದಲ್ಲದೆ ಬಿಕೆ ಹರಿಪ್ರಸಾದ್‌ ಅವರು ಮತ್ತೆ ಗೋಧ್ರಾದಂಥ ಘಟನೆ ನಡೆಯಬಹುದು ಎಂಬ ಹೇಳಿಕೆಗೆ ಕೂಡಾ ಪ್ರತಿಕ್ರಿಯಿಸಿದ ಅವರು ಅಂತಹ ಸುಳಿವು ಇದ್ದರೆ ಪೊಲೀಸ್‌ ಇಲಾಖೆಗೆ ಹೋಗಿ ಯಾಕೆ ಹೇಳುತ್ತಿಲ್ಲ? ಇವರು ಯಾರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಕೇಳಿದ್ದಾರೆ.

ಇದನ್ನು ಓದಿ: Antibiotics Price: ಜ್ವರ ಸೇರಿದಂತೆ 19 ಔಷಧಿಗಳ ದರ ಇಳಿಕೆ!!

ವಿಧ್ವಂಸಕ ಕೃತ್ಯ ಮಾಡಲು ಹೊರಟಿರುವವರ ಬಗ್ಗೆ ಕೇಳಿದರೆ ಹೇಳುತ್ತೇವೆ ಎಂಬ ಹೇಳಿಕೆ ಸರಿಯಲ್ಲ. ಹಾಗೆ ಹೇಳುವುದು ವಿಧ್ವಂಸಕ ಕೃತ್ಯ ನಡೆಯಲಿ ಎಂಬ ಅರ್ಥ ಕೊಡುತ್ತದೆ. ಹಾಗಾದರೆ ಇವರು ಪ್ರಜೆಗಳನ್ನು ರಕ್ಷಣೆ ಮಾಡುತ್ತಿದ್ದಾರೋ ಅಥವಾ ವಿಧ್ವಂಸಕ ಕೃತ್ಯಗಳನ್ನ ಮಾಡುವವರನ್ನು ರಕ್ಷಣೆ ಮಾಡುತ್ತಿದ್ದಾರೋ? ಜವಾಬ್ದಾರಿ ಸ್ಥಾನದಲ್ಲಿರುವವರು ಇಂಥ ಮಾತನ್ನಾಡಬಾರದು. ಹಾಗಾದ್ರೆ ಇಲ್ಲಿ ಭಯೋತ್ಪಾದಕರು ಆಗಿದ್ದು ಯಾರು ಎಂದು ಪೇಜಾವರ ಶ್ರೀ ಪ್ರಶ್ನಿಸಿರುವ ಕುರಿತು ಟಿವಿ 9 ವರದಿ ಮಾಡಿದೆ.

You may also like

Leave a Comment