Home » Pralhad joshi: ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ!

Pralhad joshi: ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ!

0 comments
Pralhad joshi

Pralhad joshi: ಕೆಲ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ(BS Yediyurappa) ಕಲಬುರಗಿಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದಾಗ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇದೇ ರೀತಿಯ ಮತ್ತೊಂದು ಘಟನೆ ವಿಜಯಪುರದಲ್ಲಿ ಸಂಭವಿಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ. ವಿಜಯಪುರ ನಗರದ ಸೈನಿಕ ಶಾಲಾ ಆವರಣದಲ್ಲಿ ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಆಗಮಿಸುತ್ತಿದ್ದರು. ಆದ್ರೆ ಶಾಲಾ ಆವರಣದಲ್ಲಿ ಜೋಶಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ. ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ. ನೆಲಕ್ಕೆ ಬಿದ್ದ ಬ್ಯಾರಿಕೇಡ್ಗಳನ್ನು ತಕ್ಷಣ ಪೊಲೀಸರು ಸರಿಪಡಿಸಿದ್ದಾರೆ. ಅದೃಷ್ಟವಶಾತ್ ಹೆಲಿಪ್ಯಾಡ್ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.

ಹೆಲಿಪ್ಯಾಡ್‌ ಬಳಿ ಸ್ವಚ್ಚತಾ ಕಾರ್ಯ ಮಾಡುವುದು ಲೋಕೋಪಯೋಗಿ ಇಲಾಖೆಯ ಜವಾಬ್ದಾರಿ. ಎಲ್ಲವು ಸರಿಯಿದೆ ಅನ್ನೋದನ್ನು ನೋಡಿಕೊಳ್ಳಬೇಕಿದ್ದು ಪೊಲೀಸರು. ಆದರೆ ಲೋಕೋಪಯೋಗಿ ಇಲಾಖೆ ಹೆಲಿಪ್ಯಾಡ್ ಸುತ್ತಮುತ್ತ ಯಾವುದೇ ರೀತಿಯ ಸ್ವಚ್ಚತಾ ಕಾರ್ಯ ಮಾಡೋದೆ ಇರೋದಕ್ಕೆ ಈ ಅವಘಡ ಸಂಭವಿಸಿದ್ದು, ಪಿಡಬ್ಲ್ಯೂಡಿ ಇಲಾಖೆ ಬೇಜವಾಬ್ದಾರಿತನಕ್ಕೆ ಹೆಲಿಕ್ಯಾಪ್ಟರ್ ಪೈಲೆಟ್ ಕೂಡ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.

You may also like

Leave a Comment