Home » ಗಂಡನನ್ನು ಕಳೆದುಕೊಂಡು ನೊಂದ ಗರ್ಭಿಣಿ ತನ್ನಿಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

ಗಂಡನನ್ನು ಕಳೆದುಕೊಂಡು ನೊಂದ ಗರ್ಭಿಣಿ ತನ್ನಿಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

0 comments

ಗರ್ಭಿಣಿಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ತುಂಗಭದ್ರಾ ನದಿ ನೀರಿಗೆ ಹಾರಿ ಪ್ರಾಣಬಿಟ್ಟ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ದಡೇಸೂಗೂರು ಗ್ರಾಮದ ಬಳಿ ಸಂಭವಿಸಿದೆ.

ಸಿರಗುಪ್ಪದ ಅಂಬಾನಗರ ನಿವಾಸಿ ಚೆನ್ನಮ್ಮ(35), ಇವರ ಮಕ್ಕಳಾದ ಸುಮಿತ್ರಾ(7) ಮತ್ತು ಪ್ರಶಾಂತ್(5) ಮೃತ ದುರ್ದೈವಿಗಳು. ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲಿಂದ ಸೋಮವಾರ ಸಂಜೆ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚೆನ್ನಮ್ಮಳ ಗಂಡ ರವಿ ಇತ್ತೀಚೆಗೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದ ಪತ್ನಿಗೆ ಗಂಡನ ಸಾವು ತೀವ್ರ ಆಘಾತ ನೀಡಿತ್ತು. ಇದರಿಂದ ನೊಂದ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

You may also like

Leave a Comment