ನಾನ್ ವೆಜ್ ಊಟ ಸವಿಯಲು ಬಂದ ಹೋಟೆಲ್ ಗ್ರಾಹಕರಿಗೆ ಗೋಮಾಂಸ ಬಡಿಸಿದ ಆರೋಪ ಕೇಳಿಬಂದಿದ್ದು, ಇದೀಗ ಹೋಟೆಲ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ರೆಸ್ಟೋರೆಂಟ್ ಒಂದರ ಮಾಲೀಕ ಮಟನ್ ಮಾಂಸದ ಹೆಸರಿನಲ್ಲಿ ಗೋಮಾಂಸ ಸರ್ವ್ ಮಾಡುವ ವಿಷಯ ಹಿಂದೂ ಸಂಘಟನೆಗಳ ಗಮನಕ್ಕೆ ತಿಳಿದು ಬಂದಿತ್ತು. ಆಗ ರೆಸ್ಟೋರೆಂಟ್ ವಿರುದ್ಧ ಅವರು ದೂರು ನೀಡಿದ್ದಾರೆ. ತಕ್ಷಣ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು ಫ್ರಿಡ್ಜ್‍ನಲ್ಲಿದ್ದ 60 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ಸೂರತ್‍ನ ಲಾಲ್‍ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಡಿಬಂಗ್ಲಾ ಪ್ರದೇಶದಲ್ಲಿರುವ ಈ ನಾನ್‍ವೆಜ್ ರೆಸ್ಟೋರೆಂಟ್‍ನಲ್ಲಿ ಮಾಂಸಾಹಾರ ಹೆಸರಿನಲ್ಲಿ ದನದ ಮಾಂಸ ಬಡಿಸಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳಿಗೆ ಕೆಲ ವ್ಯಕ್ತಿಗಳು ಮಾಹಿತಿ ನೀಡಿದ್ದರು. ಈ ವಿಚಾರವಾಗಿ ತನಿಖೆ ಆರಂಭಿಸಿ ದೃಢಪಡಿಸಿಕೊಂಡು, ಈ ವಿಚಾರವನ್ನು ಲಾಲ್‍ಗೇಟ್ ಪೊಲೀಸ್ ಠಾಣೆಗೆ ಹಿಂದೂ ಸಂಘಟನೆ ತಿಳಿಸಿದ್ದಾರೆ.
ಸೆಪ್ಟೆಂಬರ್ 11 ರಂದು ಹೋಟೆಲ್ ಮೇಲೆ ದಾಳಿ ನಡೆಸಿ ಫ್ರಿಡ್ಜ್‍ನಲ್ಲಿ 6 ಚೀಲಗಳಲ್ಲಿ ಇರಿಸಲಾಗಿದ್ದ 60 ಕಿಲೋಗ್ರಾಂಗಳಷ್ಟು ದನದ ಮಾಂಸವನ್ನು ವಶಪಡಿಸಿಕೊಂಡರು. ನಂತರ ಪಶುವೈದ್ಯರನ್ನು ಸ್ಥಳಕ್ಕೆ ಕರೆಸಿ ಅವರ ಸಮ್ಮುಖದಲ್ಲಿ ಪರೀಕ್ಷೆಗೆ ಮಾದರಿಗಳನ್ನು ತೆಗೆದುಕೊಂಡು ವಿಧಿ ವೈಜ್ಞಾನಿಕ ಪ್ರಯೋಗಾಲಯಕ್ಕೆ ಪೊಲೀಸರು ಕಳುಹಿಸಿದ್ದರು. ತದನಂತರ ಸೆಪ್ಟೆಂಬರ್ 14 ರಂದು ಎಫ್‍ಎಸ್‍ಎಲ್ ವರದಿ ಬಂದಿದ್ದು, ಅದರಲ್ಲಿ ಅದು ಗೋಮಾಂಸ ಎಂದು ದೃಢ ಆಗಿದೆ. ಆಗ ಲಾಲ್‍ಗೇಟ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿ ರೆಸ್ಟೋರೆಂಟ್ ಮಾಲೀಕ ಸಫ್ರ್ರಾಜ್ ಮೊಹಮ್ಮದ್ ವಜೀರ್ ಖಾನ್ ನನ್ನು ಗುಜರಾತ್ ಪ್ರಾಣಿ ಸಂರಕ್ಷಣಾ ತಿದ್ದುಪಡಿ ಕಾಯ್ದೆಯಡಿ ಬಂಧಿಸಿದ್ದಾರೆ.
ಸಫ್ರ್ರಾಜ್ ಮೊಹಮ್ಮದ್ ವಜೀರ್ ಖಾನ್‍ಗೆ ದನದ ಮಾಂಸ ಪೂರೈಸುತ್ತಿದ್ದ ಮತ್ತೋರ್ವ ಆರೋಪಿ ಅನ್ಸಾರ್ ತಲೆ ಮರೆಸಿಕೊಂಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
