6
Sharath Bache Gowda: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ವೇಳೆ ಕಿಡಿಗೇಡಿಗಳಿಂದ ಕಾರು ಧ್ವಂಸಗೊಳಿಸಿದ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ (Sharath Bache Gowda) ಪತ್ನಿ ಪ್ರತಿಭಾ ಕಾರು ನಿಲ್ಲಿಸಿ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪತ್ನಿಯ ಕಾರಿನ ಗ್ಲಾಸ್ ಒಡೆದು ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿದ್ದಾರೆ.
ಶರತ್ ಬಚ್ಚೇಗೌಡ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅವರ ಪರವಾಗಿ ಪತ್ನಿ ಅಖಾಡಕ್ಕೆ ಇಳಿದು ಪ್ರಚಾರ ನಡೆಸುವಾಗಲೇ ಕಿಡಿಗೇಡಿಗಳು ಕಾರು ಧ್ವಂಸಗೊಳಿಸಿದ್ದಾರೆ ಎಂದು ತಿಳಿಯಲಾಗಿದೆ. ಈ ಘಟನೆ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
