Home » ದತ್ತಪೀಠವನ್ನು ತಕ್ಷಣವೇ ಹಿಂದೂಗಳಿಗೆ ಹಸ್ತಾಂತರಿಸಲು ಸರ್ಕಾರಕ್ಕೆ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ತಾಕೀತು

ದತ್ತಪೀಠವನ್ನು ತಕ್ಷಣವೇ ಹಿಂದೂಗಳಿಗೆ ಹಸ್ತಾಂತರಿಸಲು ಸರ್ಕಾರಕ್ಕೆ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ತಾಕೀತು

0 comments

ಚಿಕ್ಕಮಗಳೂರು:ದತ್ತಾತ್ರೇಯರಿಗೆ ದ್ರೋಹ ಮಾಡಿದರೆ ಬಿಜೆಪಿ ಸರಕಾರವೇ ಉಳಿಯುವುದಿಲ್ಲ. ತಕ್ಷಣವೇ ಬಾಯಿ ಮುಚ್ಚಿಕೊಂಡು ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಬೇಕು. ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಸರಕಾರಕ್ಕೆ ತಾಕೀತು ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ದತ್ತ ಮಾಲಾಧಾರಣೆ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ದತ್ತಾತ್ರೇಯರಿಗೆ ದ್ರೋಹ ಮಾಡಿದರೆ ನೀವು ಅಧಿಕಾರ ಕಳೆದುಕೊಳ್ಳುತ್ತೀರಿ ಎಂದು ಬಿ.ಎಸ್.ಯಡಿಯೂರಪ್ಪರಿಗೆ ಹೇಳಿದ್ದೆ. ಹೇಳಿದ ಒಂದೇ ವರ್ಷಕ್ಕೆ ಯಡಿಯೂರಪ್ಪ ಅಧಿಕಾರ ಕಳೆದುಕೊಂಡರು ಎಂದರು.ಅಧಿಕಾರಕ್ಕೆ ಬಂದ ಒಂದೇ ತಿಂಗಳಿಗೆ ದತ್ತಪೀಠ ಹಿಂದೂಗಳಿಗೆ ಎಂದು ಒಪ್ಪಿಸುತ್ತೇವೆ ಎಂದು ಬಿಜೆಪಿ ಹೇಳಿತ್ತು. ಆದರೆ ಅಧಿಕಾರಕ್ಕೆ ಬಂದು ಎರಡು-ಮೂರು ವರ್ಷವಾದರೂ ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸಿಲ್ಲ.

ಇನ್ನೂ ಯಾಕೆ ಮೀನಾಮೇಷ ಮಾಡುತ್ತಿದ್ದೀರಿ? ಇನ್ನೂ ವಿಳಂಬ ಮಾಡಿದರೆ ಹಿಂದೂ ಸಮಾಜ ಸಹಿಸುವುದಿಲ್ಲ. ರಾಜಕಾರಣ ಏನಾದರೂ ಮಾಡಿಕೊಳ್ಳಿ, ಧರ್ಮ-ಗುರುಗಳ ಜೊತೆ ಹುಡುಗಾಟ ಒಳ್ಳೆಯದಲ್ಲ ಎಂದು ಸರಕಾರಕ್ಕೆ ಎಚ್ಚರಿಕೆ ನೀಡುತ್ತೇನೆ ಎಂದು ಗಂಗಾಧರ್ ಕುಲಕರ್ಣಿ ಹೇಳಿದ್ದಾರೆ.

You may also like

Leave a Comment