Home » SSLC ಪರೀಕ್ಷೆಯಲ್ಲಿ ಹೆಚ್ಚಿನ ಅಂಕದ ಆಮಿಷ: ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅನುಚಿತ ವರ್ತನೆ;

SSLC ಪರೀಕ್ಷೆಯಲ್ಲಿ ಹೆಚ್ಚಿನ ಅಂಕದ ಆಮಿಷ: ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅನುಚಿತ ವರ್ತನೆ;

0 comments

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಸಿಗುವ ಹಾಗೆ ಮಾಡುತ್ತೇನೆಂದು ವಿದ್ಯಾರ್ಥಿನಿ ಜೊತೆ ಶಿಕ್ಷಕರೊಬ್ಬರು ಅನುಚಿತವಾಗಿ ವರ್ತಿಸಿದ ಘಟನೆಯೊಂದು ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನಾಗಿ ಶಿಕ್ಷಕ ಪರಮೇಶ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ.

ಆರೋಪಿ ಶಿಕ್ಷಕ 45 ವರ್ಷದ ಪರಮೇಶ ಐರಣಿ ಎಂಬಾತನ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿರುವ ಪರಮೇಶ, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಪರೀಕ್ಷೆ ಆರಂಭವಾದ ದಿನದಿಂದ ವಿದ್ಯಾರ್ಥಿನಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

You may also like

Leave a Comment