Home » ತಾ.ಪಂ., ಜಿ.ಪಂ ಚುನಾವಣೆ ಕ್ಷೇತ್ರ ಪುನರ್‌ವಿಂಗಡನೆ ಅಧಿಸೂಚನೆ ಹೊರಡಿಸುವುದಾಗಿ ಹೈಕೋರ್ಟ್‌ಗೆ ಸರಕಾರ ಮಾಹಿತಿ

ತಾ.ಪಂ., ಜಿ.ಪಂ ಚುನಾವಣೆ ಕ್ಷೇತ್ರ ಪುನರ್‌ವಿಂಗಡನೆ ಅಧಿಸೂಚನೆ ಹೊರಡಿಸುವುದಾಗಿ ಹೈಕೋರ್ಟ್‌ಗೆ ಸರಕಾರ ಮಾಹಿತಿ

by Praveen Chennavara
0 comments

Panchayath election : ಬೆಂಗಳೂರು : ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ (panchayath election) ಕುರಿತು ಕ್ಷೇತ್ರ ಪುನರ್ ವಿಂಗಡಣೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವುದಾಗಿ ಹೈಕೋಟ್‌ರ್ಗೆ ಮಾಹಿತಿ ನೀಡಿದೆ.

ಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ಯ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತು.

ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರದ ಪರ ವಕೀಲರು ಹಾಜರಾಗಿ, ಕ್ಷೇತ್ರದ ಪುನರ್ ವಿಂಗಡಣೆಗೆ ಅಧಿಸೂಚನೆ ಹೊರಡಿಸಿರುವುದಾಗಿ ಅಧಿಸೂಚನೆ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಜತೆಗೆ, ಈ ಹಿಂದೆ ನಡೆದ ವಿಚಾರಣೆ ವೇಳೆ ನಿಗದಿತ ಸಮಯಕ್ಕೆ ಚುನಾವಣೆ ಪ್ರಕ್ರಿಯೆ ನಡೆಸದಿರುವ ಸರಕಾರದ ಕ್ರಮ ಉಲ್ಲೇಖಿಸಿ, ಹೈಕೋರ್ಟ್ 5 ಲಕ್ಷ ದಂಡ ವಿಧಿಸಿತ್ತು. ಈ ಮೊತ್ತವನ್ನು ಪಾವತಿಸಿರುವುದಾಗಿ ನ್ಯಾಯಪೀಠಕ್ಕೆ ವಿವರಿಸಿದರು.

ಅಲ್ಲದೇ. ಅರ್ಜಿದಾರರ ಪರ ಹಾಜರಿದ್ದ ವಕೀಲರು, ಹಿರಿಯ ವಕೀಲ ಕೆ.ಎನ್.ಫಣೀಂದ್ರ ಮತ್ತೊಂದು ನ್ಯಾಯಪೀಠದ ಮುಂದೆ ವಾದ ಮಂಡಿಸುತ್ತಿದ್ದ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು. ಈ ಅಂಶ ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್ 2 ಕ್ಕೆ ಮುಂದೂಡಿತು.

You may also like

Leave a Comment