Home » ಶಾಲಾ ಸಮವಸ್ತ್ರದಲ್ಲಿ ಮಲವಿಸರ್ಜನೆ ಮಾಡಿದ ಬಾಲಕ | ವಿಕೃತಿ ಮೆರೆದ ಶಿಕ್ಷಕ

ಶಾಲಾ ಸಮವಸ್ತ್ರದಲ್ಲಿ ಮಲವಿಸರ್ಜನೆ ಮಾಡಿದ ಬಾಲಕ | ವಿಕೃತಿ ಮೆರೆದ ಶಿಕ್ಷಕ

by Mallika
0 comments

ಬಾಲಕನೋರ್ವ ಶಾಲಾ ಸಮವಸ್ತ್ರದಲ್ಲೇ ಮಲ ವಿಸರ್ಜನೆ ಮಾಡಿಕೊಂಡಿದ್ದನ್ನು ನೋಡಿ, ಸಿಟ್ಟಾದ ಶಿಕ್ಷಕನೋರ್ವ 8 ವರ್ಷದ ಬಾಲಕನ ಮೇಲೆ ಬಿಸಿನೀರು ಸುರಿದಿದ್ದಾನೆ. ಈ ರೀತಿಯ ವಿಕೃತಿ ಘಟನೆ ರಾಯಚೂರಿನ ಮಸ್ಕಿ ತಾಲೂಕಿನಲ್ಲಿ ನಡೆದಿದೆ.

ಮಿಟ್ಟಿಕೆಲ್ಲೂರು ಮೂಲದ ಗ್ರಾಮದ ವಿದ್ಯಾರ್ಥಿ ಶಾಲೆಗೆ ಹೋದಾಗ ಶಾಲಾ ಸಮವಸ್ತ್ರದಲ್ಲೇ ವಿದ್ಯಾರ್ಥಿ ಮಲ ವಿಸರ್ಜನೆ ಮಾಡಿಕೊಂಡಿದ್ದಾನೆ. ಇದರಿಂದ ಸಿಟ್ಟಾದ ಶಿಕ್ಷಕ ವಿದ್ಯಾರ್ಥಿ ಮೇಲೆ ಬಿಸಿ ನೀರು ಎರಚಿದ್ದು, ಮಗುವಿನ ದೇಹದ ಶೇ.40ರಷ್ಟು ಭಾಗ ಬೆಂದು ಗಂಭೀರ ಗಾಯಗಳಾಗಿವೆ.

ಮಸ್ಕಿಯ ಸಂತೆಕೆಲ್ಲೂರು ಗ್ರಾಮದಲ್ಲಿ 2ನೇ ತರಗತಿಯ ಅಖಿತ್ (8) ಎಂಬ ಬಾಲಕನೇ ಗಂಭೀರ ಗಾಯಗೊಂಡ ವಿದ್ಯಾರ್ಥಿ. ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮಗುವಿಗೆ ಬಿಸಿ ನೀರು ಹಾಕಿದಾಗ, ಮಗು ಕಿರುಚಾಡಿದ್ದು, ಕೂಡಲೇ ಬಾಲಕನನ್ನು ಲಿಂಗಸುಗೂರು ತಾಲೂಕು ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಕಳೆದ ಆಗಸ್ಟ್ 2ರಂದು ಘಟನೆ ನಡೆದಿದೆ. ಆದರೆ ಈ ಘಟನೆ ನಡೆದು ಒಂದು ತಿಂಗಳಾದರೂ ದೂರು ದಾಖಲಿಸಿಕೊಳ್ಳಲು ಮಸ್ಕಿ ಪೊಲೀಸರು ಹಿಂದೇಟು ಹಾಕಿದ್ದಾರೆ. ಅಲ್ಲದೇ ಮಗುವಿಗೆ ಅನ್ಯಾಯ ನಡೆದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿಲ್ಲ. ಕೂಡಲೇ ಶಿಕ್ಷಕನ ವಿರುದ್ದ ಕಠಿಣ ಕ್ರಮಕ್ಕೆ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

You may also like

Leave a Comment