Home » ಜಿಲ್ಲಾಧಿಕಾರಿಗಳ ದಿಢೀರ್‌ ವರ್ಗಾವಣೆ

ಜಿಲ್ಲಾಧಿಕಾರಿಗಳ ದಿಢೀರ್‌ ವರ್ಗಾವಣೆ

0 comments

ಕರ್ನಾಟಕ ಸರ್ಕಾರ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ, ಕೊಪ್ಫಳ, ದಾವಣಗೆರೆ ಸೇರಿದಂತೆ ಹಲವಾರು ಜಿಲ್ಲಾಧಿಕಾರಿಗಳು ವರ್ಗವಾಗಿದ್ದಾರೆ.

ಕರ್ನಾಟಕ ಸರ್ಕಾರ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅಮ್ಲಾನ್ ಆದಿತ್ಯ ಬಿಸ್ವಾಸ್, ಕ್ಯಾಪ್ಟನ್ ಡಾ. ರಾಜೇಂದ್ರ ಕೆ., ವಿಕಾಸ್‌ ಕಿಶೋರ್‌ ಸುರಳ್ಕರ್‌ ಸೇರಿದಂತೆ ವಿವಿಧ ಅಧಿಕಾರಿಗಳು ವರ್ಗಾವಣೆಗೊಂಡಿದ್ದಾರೆ.

ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ. ಸುಂದರೇಶ್ ಬಾಬುರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಸ್ಮಾರ್ಟ್‌ ಸಿಟಿ ಲಿಮಿಟೆಡ್ ಎಂಡಿಯಾಗಿ ಅವರು ನೇಮಕಗೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಕೆ. ಶ್ರೀನಿವಾಸರನ್ನು ವರ್ಗಾವಣೆ ಮಾಡಲಾಗಿದೆ.

ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಆದರೆ ಅವರಿಗೆ ಯಾವುದೇ ಸ್ಥಳವನ್ನು ನಿಯುಕ್ತಿ ಮಾಡಿಲ್ಲ.

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಅಮ್ಲಾನ್ ಆದಿತ್ಯ ಬಿಸ್ವಾಸ್‌ರನ್ನು ಬೆಂಗಳುರು ವಿಭಾಗಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಎಸ್‌ಸಿಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

You may also like

Leave a Comment