Home » ದ.ಕ.ಜಿಲ್ಲಾ ಎಸ್ಪಿ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ದ.ಕ.ಜಿಲ್ಲಾ ಎಸ್ಪಿ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

by Praveen Chennavara
0 comments

ರಾಜ್ಯ ಸರಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರನ್ನು ಬೆಂಗಳೂರು ವೈರ್ ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ)ಯ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೋನಾವನೆ ರಿಶಿಕೇಷ್ ಭಾಗವಾನ್ ಅವರನ್ನು ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮಾತೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

You may also like

Leave a Comment