Home » ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ರದ್ದು‌!

ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ರದ್ದು‌!

by Praveen Chennavara
0 comments

ಮಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ವನ್ನುಸಂಚರಿಸುವ ದಾರಿಯಲ್ಲಿ ಕೊರಗಜ್ಜ ದೈವದ ಕೋಲ ಹಿನ್ನೆಲೆ ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವದ ಕೋಲಕ್ಕೆ ಸಮಸ್ಯೆಯಾಗಬಾರದೆಂದು ರೋಡ್ ಶೋ ರದ್ದು ಗೊಳಿಸಲಾಗಿದೆ.

ಶನಿವಾರ ಕೊರಗಜ್ಜ ದೈವಸ್ಥಾನದಲ್ಲಿ ಕೋಲ ನಿಗದಿಯಾಗಿದ್ದು ,ಹೀಗಾಗಿ ಭದ್ರತೆ ದೃಷ್ಟಿಯಿಂದ ರೋಡ್ ಶೋ ರದ್ದುಮಾಡಲಾಗಿದೆ.ಪದವಿನಂಗಡಿ ಬಳಿಯ ಖಾಸಗಿ ಸಭಾಂಗಣದಲ್ಲಿ ನಡೆಯಬೇಕಿದ್ದ ಬಿಜೆಪಿ ಪಕ್ಷದ ಸಭೆಯನ್ನೂ ಸ್ಥಳಾಂತರವಾಗಿದೆ.

ಮಂಗಳೂರು ಏರ್ ಪೋರ್ಟ್ ಬಳಿಯೇ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

You may also like

Leave a Comment