Vande Bharat : ಮಂಗಳೂರಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೇಕು ಎಂಬುದು ಕರಾವಳಿಗರ ಕೂಗಾಗಿತ್ತು. ಕೆಲವು ಅಡಚಡಣೆಗಳಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಈ ಕುರಿತು ಕರಾವಳಿ ಗರಿಗೆ ಗುಡ್ ನ್ಯೂಸ್ ಕೊಟ್ಟಿದ್ದು ಮಂಗಳೂರಿಗೆ ಬಂದೇ ಭಾರತ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸುವ ಬಗ್ಗೆ ಘೋಷಣೆ ಹೊರಡಿಸಿದ್ದಾರೆ.
ಹೌದು, ಭಾರತೀಯ ರೈಲ್ವೆ ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ವಿಭಾಗದ ವಿದ್ಯುದೀಕರಣ ಕಾಮಗಾರಿಯನ್ನು ಪೂರ್ಣಗೊಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ಇದರಿಂದಾಗಿ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಭಾಗದ ಸಂಪರ್ಕ ಇನ್ನಷ್ಟು ಸುಲಭವಾಗಲಿದೆ. ಜೊತೆಗೆ ಕರಾವಳಿಗೆ ವಂದೇ ಭಾರತ್ ರೈಲು ಓಡಿಸಲು ಸಹ ಅನುಕೂಲವಾಗಲಿದೆ. ಈ ಕುರಿತು ಮಾತನಾಡಿದ ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, “ಈಗ ನಾವು ಈ ಮಾರ್ಗದ ಮೂಲಕ ಮಂಗಳೂರಿಗೆ ವಂದೇ ಭಾರತ್ ರೈಲನ್ನು ಓಡಿಸಲು ಸಾಧ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.
ಇನ್ನೂ ಉದ್ಯಮಿ ಮೋಹನ್‌ದಾಸ್ ಪೈ ಅವರು, ಧನ್ಯವಾದಗಳು ಈಗ ಬೆಂಗಳೂರಿನಿಂದ ಮಂಗಳೂರಿಗೆ 3ರಿಂದ 4 ಗಂಟೆಗಳಲ್ಲಿ ಹೋಗುವುದಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪರಿಚಯಿಸಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ವಿ. ಸೋಮಣ್ಣ ಅವರು, ಧನ್ಯವಾದಗಳು. ಇದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರ ವಿಕಸಿತ ಭಾರತದ ಕನಸಿನ ಯಶಸ್ಸು ಹಾಗೂ ರೈಲ್ವೇ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಕಾರ್ಯಕ್ಷಮತೆಗೆ ಸಾಕ್ಷಿ. ಹಾಗೆಯೇ, ಮಂಗಳೂರು ಭಾಗದ ಜನರ ಬಹುಬೇಡಿಕೆಯಾಗಿರುವ ವಂದೇ ಭಾರತ್ ರೈಲು ಸಂಚಾರಿಸುವ ಕಾಲವೂ ಸನ್ನಿಹಿತವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕನಸು ನನಸಾಗಲಿದೆ ಎಂದು ಹೇಳಿದ್ದಾರೆ.
