Home » Vinay Kulkarni: ಧಾರವಾಡ ಪ್ರವೇಶಕ್ಕೆ ವಿನಯ್‌ ಕುಲಕರ್ಣಿಗೆ ಅನುಮತಿ ನಿರಾಕರಣೆ: ಹೈಕೋರ್ಟ್‌

Vinay Kulkarni: ಧಾರವಾಡ ಪ್ರವೇಶಕ್ಕೆ ವಿನಯ್‌ ಕುಲಕರ್ಣಿಗೆ ಅನುಮತಿ ನಿರಾಕರಣೆ: ಹೈಕೋರ್ಟ್‌

1 comment
Vinay Kulkarni

Vinay Kulkarni: ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ವಿನಯ್‌ ಕುಲಕರ್ಣಿ ಅನುಮತಿ ಇಲ್ಲ ಎಂದು ಸುಪ್ರೀಂಕೋರ್ಟ್‌ ಅನುಮತಿ ನಿರಾಕರಿಸಿದೆ ಎಂದು ವರದಿಯಾಗಿದೆ.  ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತವರು ಜಿಲ್ಲೆಗೆ ತೆರಳಲು ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಳಿಸಲಾಗಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜಯಂತ್‍ಕುಮಾರ್ ಅವರು ಅರ್ಜಿಯನ್ನು ವಜಾಗೊಳಿಸಿದರು. ನ್ಯಾಯಾಲಯದ ಈ ತೀರ್ಪಿನಿಂದಾಗಿ ವಿನಯ್ ಕುಲಕರ್ಣಿ ತವರು ಜಿಲ್ಲೆ ಧಾರವಾಡಕ್ಕೆ ತೆರಳುವ ಅನುಮತಿ ನಿರಾಕರಿಸಿದೆ , ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸುವುದಕ್ಕೂ ಸಂಕಷ್ಟ ಎದುರಾಗಿದೆ.

ಸೂಚಕರ ಮೂಲಕವೇ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದು ನ್ಯಾಯಾಲಯ ಹೇಳಿದೆ. ಇದರಿಂದ ಮಾಜಿ ಸಚಿವ, ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿತ್ತು. ಚುನಾವಣೆ ಸ್ಪರ್ಧೆಯ ಕಾರಣದಿಂದ ಷರತ್ತು ಸಡಿಲಿಸಲು ಅವಕಾಶ ಕೋರಲಾಗಿತ್ತು.

You may also like

Leave a Comment