Home » Toilet Cleaning: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ; ಶಾಲಾ ಮಕ್ಕಳಿಂದ ಶೌಚಾಲಯ ಶುಚಿ ಮಾಡಿಸಿದ ಶಿಕ್ಷಕಿ!!

Toilet Cleaning: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ; ಶಾಲಾ ಮಕ್ಕಳಿಂದ ಶೌಚಾಲಯ ಶುಚಿ ಮಾಡಿಸಿದ ಶಿಕ್ಷಕಿ!!

1 comment
Toilet Cleaning

Toilet Cleaning: ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ವರದಿಯಾಗಿದ್ದು, ಕಲಬುರಗಿಯಲ್ಲಿ ಶಿಕ್ಷಕಿಯೊಬ್ಬರು ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛ(Toilet Cleaning)ಮಾಡಿಸಿದ ಘಟನೆ ವರದಿಯಾಗಿದೆ.

ಶಾಲೆಗಳಲ್ಲಿ ಮಕ್ಕಳ ಕಡೆಯಿಂದ ಶೌಚಾಲಯ ಸ್ವಚ್ಛಗೊಳಿಸದಂತೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದರು ಕೂಡ ಶಿಕ್ಷಕರು ಮಾತ್ರ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಘಟನೆ ವರದಿಯಾಗಿದೆ. ಕಲಬುರಗಿಯ ಮೌಲಾನಾ ಆಜಾದ್ ಮಾಡೆಲ್ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯ ಶಿಕ್ಷಕಿ ಜೋಹರ ಜಬೀನ ಎಂಬುವವರು ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಚ (Toilet Cleaning)ಮಾಡಿಸಿದ ಘಟನೆ ನಡೆದಿದೆ ಎನ್ನಲಾಗಿದೆ. ಇದರ ಜೊತೆಗೆ ಮಕ್ಕಳನ್ನು ತಮ್ಮ ಮನೆಯ ಕೆಲಸಕ್ಕೂ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸದ್ಯ, ರೋಜಾ ಪೊಲೀಸ್ ಠಾಣೆಯಲ್ಲಿ ಮುಖ್ಯ ಶಿಕ್ಷಕಿ ಜೋಹರಾ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

You may also like

Leave a Comment