Home » Akrama Sakrama : ಅಕ್ರಮ ಸಕ್ರಮದ ಬಗ್ಗೆ ಬಿಗ್ ಅಪ್ಡೇಟ್ ಇಲ್ಲಿದೆ!

Akrama Sakrama : ಅಕ್ರಮ ಸಕ್ರಮದ ಬಗ್ಗೆ ಬಿಗ್ ಅಪ್ಡೇಟ್ ಇಲ್ಲಿದೆ!

5 comments
Akrama-Sakrama

Akrama-Sakrama : ಸರ್ಕಾರ ರೈತರ ಪರವಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಬೆಳೆ ಹಾನಿ ಪರಿಹಾರ, ಟಾರ್ಪಲ್ ವಿತರಣೆ, ಕೃಷಿ ಪಂಪ್‍ಸೆಟ್ ಅಳವಡಿಕೆ, ಸಹಾಯಧನದಡಿ ಬಿತ್ತನೆ ಬೀಜ, ಕೃಷಿಕರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅದಲ್ಲದೆ ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದ್ದು, ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ.

ಶಾಸಕ ಕೆ.ಜಿ. ಬೋಪಯ್ಯ ಅವರು ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 57 ಮಂದಿಗೆ ‘ಸಾಗುವಳಿ ಚೀಟಿ’ ವಿತರಿಸಿದರು.

ಇನ್ನು ಮಡಿಕೇರಿ ತಾಲ್ಲೂಕಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 705 ಅರ್ಜಿಗಳಲ್ಲಿ 545 ಮಂದಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ. ಇನ್ನೂ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ 31 ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇದ್ದು, ಈ ಅವಕಾಶವನ್ನು ಅರ್ಹರು ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಕೆ.ಜಿ. ಬೋಪಯ್ಯ ಅವರು ತಿಳಿಸಿದ್ದಾರೆ.

ಆದರೆ ಹಕ್ಕು ಪತ್ರ ಪಡೆದವರು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಉಲ್ಲಂಘಿಸಿದಂತಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಅಕ್ರಮ ಸಕ್ರಮ (Akrama-Sakrama) ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ, ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿದ ಅರ್ಹರೆಲ್ಲರಿಗೂ ನ್ಯಾಯ ಒದಗಿಸಲು ಪ್ರಯತ್ನಿಸಲಾಗಿದ್ದು, ಸಾಗುವಳಿ ಚೀಟಿ ಪಡೆದವರು ಸಹಕಾರ ಸಂಘದ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ ಎಂದರು.

ಮುಖ್ಯವಾಗಿ ಕೃಷಿಕರು ಸ್ವಾವಲಂಬನೆಯಿಂದ ಬದುಕುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಎಲ್ಲರೂ ಆರ್ಥಿಕವಾಗಿ ಸದೃಢರಾಗಬೇಕು ಎಂಬುದು ಪ್ರಮುಖ ಉದ್ದೇಶವಾಗಿದೆ ಎಂದರು.

You may also like

Leave a Comment