Gruhalakshmi Guarantee Scheme: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ (Gruhalakshmi Guarantee Scheme)ಅನುಸಾರ ಸರ್ಕಾರದಿಂದ ಮಾಸಿಕ 2 ಸಾವಿರ ರೂ. ನೋಂದಣಿ ಮಾಡಿಸಿಕೊಂಡವರ ಬ್ಯಾಂಕ್ ಖಾತೆಗೆ (DBT) ನೇರ ವರ್ಗಾವಣೆ ಮಾಡಲಾಗುತ್ತಿದೆ. ರಾಜ್ಯದ ಬಹುತೇಕ ಮನೆ ಯಜಮಾನಿಯರು ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತನ್ನು ಪಡೆದಿದ್ದು, ಇದೀಗ,ಎರಡನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. ಮತ್ತೆ ಕೆಲವರಿಗೆ ತಾಂತ್ರಿಕ ದೋಷದಿಂದ, ಸರ್ವರ್ ಸಮಸ್ಯೆಗಳಿಂದ, ಕೆವೈಸಿ ಆಗದಿರುವ ಹಿನ್ನೆಲೆ ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತಿನ ಹಣ ಇನ್ನೂ ಕೂಡ ಖಾತೆಗೆ ಜಮೆ ಆಗಿಲ್ಲ.
ಕುಟುಂಬದ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣ ಅಕ್ಟೋಬರ್ ಎರಡನೇ ವಾರ ಅಂದರೆ, ನವರಾತ್ರಿ, ದಸರಾ ಹಬ್ಬದ ಸಂದರ್ಭದಲ್ಲಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎನ್ನುವ ವಿಚಾರ ಸರಕಾರದಿಂದ ಹೊರಬಿದ್ದಿದೆ. ಇದರ ಜೊತೆಗೆ ಮೊದಲ ಕಂತಿನ ಹಣ ಜಮೆ ಆಗದೇ ಇರುವವರಿಗೂ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಇದೀಗ ನವರಾತ್ರಿ, ದಸರಾ ಹಾಗೂ ದೀಪಾವಳಿ ಹಬ್ಬದ ಹೊತ್ತಲೇ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ 4000 ಸಾವಿರ ರೂಪಾಯಿ ಹಣ ಗೃಹಿಣಿಯರ ಖಾತೆಗೆ ಜಮೆ ಆಗಲಿದೆ. ಮೊದಲ ಕಂತು ಇದುವರೆಗೆ ಬಾರದೇ ಇರುವವರಿಗೆ ಇದೀಗ ಒಟ್ಟು 4000 ರೂಪಾಯಿ ದೊರೆಯಲಿದೆ ಎಂದು ಈ ಹಿಂದೆಯೇ ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದಾರೆ.
