Gujarat: ಶಾಲೆಯ ಆಟದ ಮೈದಾನದಲ್ಲಿ(School ground)ಕ್ರಿಕೆಟ್(cricket) ಆಡುವ ಸಂದರ್ಭದಲ್ಲಿ ದಲಿತ ಹುಡುಗನೊಬ್ಬ ಚೆಂಡನ್ನು ಎತ್ತಿಕೊಂಡ ಕಾರಣಕ್ಕೆ ಜನರ ನಡುವೆ ಘರ್ಷಣೆ ನಡೆದಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಬಾಲಕ ಮಾವನ ಮೇಲೆ ಹಲ್ಲೆ ಮಾಡಿದ್ದಲ್ಲದೆ ಅವರನ್ನು ಥಳಿಸಿ ಹೆಬ್ಬೆರಳು ಕತ್ತರಿಸಿದ ಅವಮಾನಕರವಾದ ಘಟನೆಯೊಂದು ಬೆಳಕಿಗೆ ಬಂದಿದೆ.
ಹೌದು, ಗುಜರಾತ್‌ನ(Gujarat) ಪಟಾನ್ ಜಿಲ್ಲೆಯ(Patan district) ಗ್ರಾಮಸ್ಥರು ಭಾನುವಾರ(Sunday) ಶಾಲೆಯೊಂದರ ಆಟದ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ದಲಿತ ಬಾಲಕನೊಬ್ಬ ಚೆಂಡನ್ನು ಮುಟ್ಟಿದ್ದ. ಇದರಿಂದ ಕೋಪಗೊಂಡ ಗ್ರಾಮಸ್ಥರು ಬಾಲಕನಿಗೆ ಜಾತಿ ನಿಂದನೆ ಮಾಡಿದ್ದಲ್ಲದೇ ಬೆದರಿಕೆ ಹಾಕಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಬಾಲಕನ ಸೋದರ ಮಾವ ಧೀರಜ್ ಪರ್ಮಾರ್(Dhiraj parmar) ಯುವಕರ ಗುಂಪಿಗೆ ಹಾಗೆ ಮಾತನಾಡದಂತೆ ಹೇಳಿ ಪರಿಸ್ಥಿತಿಯನ್ನು ತಿಳಿಗೊಳಿಸಿ ಕಳುಹಿಸಿದ್ದಾರೆ. ಅದೇ ದಿನ ಸಂಜೆ ಏಳು ಜನರ ಗುಂಪು ಬಾಲಕನ ಸೋದರಮಾವ ಧೀರಜ್ ಹಾಗೂ ಆತನ ಸಹೋದರ ಕೀರ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತನ ಹೆಬ್ಬೆರಳನ್ನು ಕತ್ತರಿಸಿ ಪರಾರಿಯಾಗಿದ್ಧಾರೆ.
ಘಟನೆ ಸಂಬಂಧ ಏಳು ಮಂದಿ ವಿರುದ್ಧ FIR ದಾಖಲಿಸಲಾಗಿದ್ದು ಆರೋಪಿಗಳ ಬಂಧನಕ್ಕೆ ಬಲೆಬೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣದ ಏಳು ಆರೋಪಿಗಳು ಘಟನೆ ನಂತರ ತಲೆಮಾರಿಸಿಕೊಂಡಿದ್ದು ಅವರ ಪತ್ತೆಗಾಗಿ ತಂಡವನ್ನು ರಚಿಸಲಾಗಿದೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಮತ್ತು ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ ಕಾಯ್ದೆ) ಸೆಕ್ಷನ್ 326 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಆಯುಧಗಳಿಂದ ಗಂಭೀರ ಗಾಯವನ್ನು ಉಂಟುಮಾಡುವುದು), 506 (ಕ್ರಿಮಿನಲ್ ಬೆದರಿಕೆ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿದ್ದಾರೆ.
