Monsoon 2023: ಮಳೆ ಇಲ್ಲ ಎಂಬ ಜನರ ಕೂಗು ಇತ್ತೀಚೆಗೆ ಸ್ವಲ್ಪ ಕಡಿಮೆಯಾಗಿದೆ. ರಾಜ್ಯಾದ್ಯಂತ ಮುಂಗಾರು (Monsoon 2023)ಚುರುಕುಗೊಂಡಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿದೆ.
ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆ, ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುಂಗಾರು ತಡವಾಗಿ ರಾಜ್ಯಕ್ಕೆ ಆಗಮಿಸುವ ಕಾರಣದಿಂದ ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಕೃಷಿ ಚಟುವಟಿಕೆಗಳು ಇನ್ನೂ ಆರಂಭವಾಗಿಲ್ಲ.
