LPG Gas Price Hike: ದಿನಂಪ್ರತಿ ಪ್ರತಿ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನತೆಗೆ ಕೇಂದ್ರ ಸರ್ಕಾರವು(Central Government) ಆಗಸ್ಟ್ನಲ್ಲಿ ದೇಶೀಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 200 ರೂ.ಗಳಷ್ಟು ಕಡಿಮೆ ಮಾಡಿ ಕೊಂಚ ರಿಲೀಫ್ ನೀಡಿತ್ತು. ಇದೀಗ, ಮತ್ತೊಮ್ಮೆ ರಾಜ್ಯದ ಜನತೆಗೆ ಶಾಕ್ (Shocking News)ಎದುರಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು ಸಾಮಾನ್ಯವಾಗಿ ತಿಂಗಳ ಮೊದಲ ದಿನಾಂಕದಂದು ಎಲ್ಪಿಜಿ ಬೆಲೆಗಳನ್ನು ಪರಿಷ್ಕರಣೆ ಮಾಡುತ್ತವೆ. ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 209 ರೂ.ಗೆ ಏರಿಕೆ ಮಾಡಿದ(LPG Gas Price Hike) ಪರಿಣಾಮ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 209 ರೂ.ಗೆ ಹೆಚ್ಚಳ ಮಾಡಿದ್ದು, ಈ ಬೆಲೆಗಳು ಇಂದಿನಿಂದಲೇ ಅಂದರೆ ಅಕ್ಟೋಬರ್ ಒಂದರಿಂದಲೇ ಜಾರಿಗೆ ಬರಲಿವೆ. ಗ್ಯಾಸ್ ಬೆಲೆ ಏರಿಕೆಯ ಪರಿಣಾಮ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಚಿಲ್ಲರೆ ಮಾರಾಟ ಬೆಲೆ ಪ್ರತಿ ಸಿಲಿಂಡರ್ಗೆ 1731.50 ರೂ.ಗೆ ಹೆಚ್ಚಳ ಕಂಡಿದೆ.
