Odisha Balasore train accident :ಭುವನೇಶ್ವರ: ಒಡಿಶಾದ ಬಾಲಾ ಸೋರ್ ಬಹನಾಗ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದಿಂದ (Odisha Balasore train accident) 275 ಮಂದಿಯ ಸಾವು ಆಗಿದೆ. ಹಾಗೂ ಸುಮಾರು 1,000 ಮಂದಿಯನ್ನು ಗಾಯಗೊಳಿಸಲು ಕಾರಣ ಆದ ವ್ಯಕ್ತಿಗಳ ವಿರುದ್ಧ ಸರ್ಕಾರಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿರ್ದಿಷ್ಟ ಇಂಥವರೇ ರೈಲ್ವೇ ಉದ್ಯೋಗಿಗಳು ಈ ಅಪರಾಧವನ್ನು ಮಾಡಿದ್ದಾರೆ ಎಂದು ಇನ್ನೂ ಪತ್ತೆ ಮಾಡಲಾಗಿಲ್ಲ. ಅದನ್ನು ತನಿಖೆಯ ಸಮಯದಲ್ಲಿ ಬಹಿರಂಗಪಡಿಸಲಾಗುವುದು ಎಂದು ಕಟಕ್‌ನಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (FIR) ತಿಳಿಸಿದೆ.
ಐಪಿಸಿ ಸೆಕ್ಷನ್ ಗಳಾದ 304-ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಸೆಕ್ಷನ್ 337 (ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯದಿಂದ ನೋವುಂಟುಮಾಡುವುದು) ಮತ್ತು 338 (ಘೋರವಾದ ಗಾಯವನ್ನು ಉಂಟುಮಾಡುವುದು) ಮುಂತಾದ ಪೀನಲ್ ಕೊಡ್ ನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇಷ್ಟೇ ಪ್ರಕರಣ ಅಲ್ಲದೇ, ಸೆಕ್ಷನ್ 153 (ಉದ್ದೇಶ ಪೂರ್ವಕ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದಕ್ಕೆ), 154 (ನಿರ್ಲಕ್ಷ್ಯದ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಹಾಗೆಯೇ 175 (ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಮತ್ತು ರೈಲ್ವೆ ಕಾಯ್ದೆ 1989 ಅಡಿಯಲ್ಲೂ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಎಲ್ಲಾ ಆರೋಪಗಳಿಗೆ ಅತ್ಯಧಿಕ ದಂಡದೊಂದಿಗೆ ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಈಗ ಇಬ್ಬರು ಡಿಎಸ್ಪಿ ದರ್ಜೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದಲ್ಲಿ ಯಾರದೇ ಪಾತ್ರ ಕಂಡುಬಂದರೆ ತನಿಖೆಯ ವ್ಯಾಪ್ತಿ ಇನ್ನಷ್ಟು ವಿಸ್ತಾರಗೊಳ್ಳಬಹುದು ಎನ್ನಲಾಗಿದೆ.
ಇದನ್ನೂ ಓದಿ: Bihar DCM Tejaswi yadav: ನಾವು ಉದ್ದೇಶಪೂರ್ವಕವಾಗಿಯೇ ಸೇತುವೆಯನ್ನು ಕೆಡವಿದ್ದೇವೆ- ಅಚ್ಚರಿ ಹೇಳಿಕೆ ನೀಡಿದ ಬಿಹಾರ ಡಿಸಿಎಂ!!
