Home » ಜಮ್ಮು-ಕಾಶ್ಮೀರ : ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರ ಗುಂಡಿನ ದಾಳಿ | ಇಬ್ಬರು ಬಲಿ, 12 ಮಂದಿಗೆ ಗಾಯ

ಜಮ್ಮು-ಕಾಶ್ಮೀರ : ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರ ಗುಂಡಿನ ದಾಳಿ | ಇಬ್ಬರು ಬಲಿ, 12 ಮಂದಿಗೆ ಗಾಯ

by ಹೊಸಕನ್ನಡ
0 comments

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿವೆ.

ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಸಂಜೆ ವೇಳೆ ಪಂಥಾ ಚೌಕ್ ಬಳಿಯ ಝೆವಾನ್ ನಲ್ಲಿ ಈ ದಾಳಿ ನಡೆದಿದ್ದು, 12 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅದರಲ್ಲಿ ನಾಲ್ಕು ಮಂದಿಯ ಸ್ಥಿತಿ ಗಂಭೀರ ಎಂದು ತಿಳಿದುಬಂದಿದೆ.

ಘಟನಾ ಪ್ರದೇಶವನ್ನು ಸಂಪೂರ್ಣ ಪೊಲೀಸ್, ಭದ್ರತಾ ಸಿಬ್ಬಂದಿಗಳು ಸುತ್ತುವರೆದಿದ್ದು, ಉಗ್ರರನ್ನು ಹಿಡಿಯಲು ಶೋಧಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

You may also like

Leave a Comment