Home » Vande Bharat Express: ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜುಗಳಿಗೆ ಹಾನಿ!

Vande Bharat Express: ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜುಗಳಿಗೆ ಹಾನಿ!

2 comments
Vande Bharat Express

Vande Bharat Express: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು.

ಇದೀಗ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚಾಲನೆ ನೀಡಿದ ಕೇರಳದ (Kerala) ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ (Vande Bharat Express) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ತಿರುಣವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ, ರೈಲು ಕಾಸರಗೋಡಿನಿಂದ ತಿರುವನಂತಪುರಂಗೆ ತೆರಳುತ್ತಿತ್ತು.

ಸದ್ಯ ಈ ಘಟನೆಯಿಂದ ಯಾರೂ ಗಾಯಗೊಂಡಿಲ್ಲ ಒಂದು ಕೋಚ್‌ನ ವಿಂಡ್‌ಶೀಲ್ಡ್​ಗೆ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾವು ರೈಲು ಭದ್ರತೆಯನ್ನು ಬಲಪಡಿಸಲು ನಿರ್ಧರಿಸಿದ್ದೇವೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

ಕಳೆದ ಮೂರು ತಿಂಗಳಲ್ಲಿ ಕಲ್ಲು ತೂರಾಟ ನಡೆದ ಮೂರನೇ ಘಟನೆ ಇದಾಗಿದೆ. ಈ ಹಿಂದೆ ಏಪ್ರಿಲ್ 6 ರಂದು ವಿಶಾಖಪಟ್ಟಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಮಾರ್ಚ್ 12 ರಂದು ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಅಧಿಕಾರಿಗಳ ಪ್ರಕಾರ, ಕಿಡಿಗೇಡಿಗಳು ಕಲ್ಲು ತೂರಾಟದಿಂದ ಕೋಚ್ ಕಿಟಕಿ ಗಾಜು ಒಡೆದಿದೆ ಎಂದು ಎಂಬ ಮಾಹಿತಿ ದೊರೆತಿದೆ.

ಇದನ್ನೂ ಓದಿ: ವಿಶ್ವದಲ್ಲಿ ಅತಿ ಹೆಚ್ಚು ಸಂಬಳ ಇರುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

You may also like

Leave a Comment