Bullet Train : ಭಾರತೀಯರ ಹಲವು ವರ್ಷಗಳ ಕನಸು ಇದೀಗ ನನಸಾಗುವ ಸಮಯ ಬಂದಿದೆ. ಅದೇನೆಂದರೆ ಭಾರತೀಯರೆಲ್ಲರೂ ಕಾದು ಕುಳಿತಿದ್ದ ಬುಲೆಟ್ ಟ್ರೈನ್ ವಿಚಾರ. ಯಸ್, ಬುಲೆಟ್ ಟ್ರೈನ್ ಓಡಾಟ ಯಾವಾಗ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದ್ದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಈ ಕುರಿತು ಬಿಗ್ ಅಪ್ಡೇಟ್ ನೀಡಿದ್ದಾರೆ.
ದೇಶದ ಮೊದಲ ಬುಲೆಟ್ ರೈಲು (Bullet Train) 2027 ರ ಆಗಸ್ಟ್ 15 ರಂದು ಸಂಚಾರ ಆರಂಭಿಸಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಪ್ರಕಟಿಸಿದ್ದಾರೆ. ಇದು ಭಾರತದ ರೈಲ್ವೆ ಆಧುನೀಕರಣ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲು ಎಂದು ಗುರುತಿಸಲಾಗಿದೆ.
ಈ ಘೋಷಣೆಯು, ಭಾರತವು ತನ್ನ ಮೊದಲ ಬುಲೆಟ್ ರೈಲು ಯಾವಾಗ ಕಾರ್ಯಾಚರಣೆಯನ್ನು ನೋಡುತ್ತದೆ ಎಂದು ಅನೇಕ ನಾಗರಿಕರು ಕೇಳುತ್ತಿದ್ದ ಪ್ರಶ್ನೆಗೆ ಸ್ಪಷ್ಟತೆಯನ್ನು ತಂದಿದೆ. ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಈ ಹೈಸ್ಪೀಡ್ ರೈಲು ಯೋಜನೆಯು ಮಹಾರಾಷ್ಟ್ರದ ಮುಂಬೈ ಮತ್ತು ಗುಜರಾತ್‌ನ ಅಹಮದಾಬಾದ್ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಮತ್ತು ದೇಶದಲ್ಲಿ ಜಾಗತಿಕ ಗುಣಮಟ್ಟದ ರೈಲು ಮೂಲಸೌಕರ್ಯವನ್ನು ಪರಿಚಯಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ಈ ಬುಲೆಟ್ ರೈಲು ಯೋಜನೆ ಒಟ್ಟು 12 ನಿಲ್ದಾಣಗಳನ್ನು ಒಳಗೊಂಡಿದ್ದು, ಗುಜರಾತ್ ನಲ್ಲಿ 9 ಹಾಗೂ ಮಹಾರಾಷ್ಟ್ರದಲ್ಲಿ ಮೂರು ನಿಲ್ದಾಣಗಳನ್ನು ಒಳಗೊಂಡಿದೆ. ಸಬರಮತಿ, ಅಹಮದಾಬಾದ್, ಆನಂದ್, ವಡೋದರ, ಭರೂಚ್, ಸೂರತ್, ಬಿಲಿಮೋರಾ, ವಾಪಿ, ಬೋಯಿಸರ್, ವಿರಾರ್, ಥಾಣೆ ಹಾಗೂ ಮುಂಬೈ. ಆರಂಭದಲ್ಲಿ 2026ರ ವೇಳೆಗೆ ಈ ಯೋಜನೆಯನ್ನು ಪೂರ್ಣಗೊಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಆದರೆ ಕೋವಿಡ್, ಮಹಾರಾಷ್ಟ್ರದಲ್ಲಿ ಭೂ ಸ್ವಾಧೀನ ವಿಳಂಬ ಇತ್ಯಾದಿ ಕಾರಣಗಳಿಂದ ಬುಲೆಟ್ ರೈಲು ಯೋಜನೆ ಕಾಮಗಾರಿಗೆ ಅಡ್ಡಿಯಾಗಿತ್ತು. ಈಗ ಎಲ್ಲಾ ಅಡ್ಡಿಗಳು ನಿವಾರಣೆಯಾಗಿದ್ದು ಕಾಮಗಾರಿ ಭರದಿಂದ ನಡೆಯುತ್ತಿದೆ.
