8
ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಮಧ್ಯೆಯೇ ದ್ವಿಚಕ್ರ ವಾಹನವೊಂದರ ಮೇಲೆ ಮಗುಚಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆಯೊಂದು ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕಂಚಿನಡ್ಕ ನಿವಾಸಿ ಸಂಶುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿಯು ಪಡುಬಿದ್ರಿ ಜಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯಿಂದ ಕೆಲ ಕಾಲ ಸಂಚಾರಕ್ಕೆ ತೊಂದರೆಯಾಗಿದ್ದು, ಕೂಡಲೇ ಸ್ಥಳಕ್ಕೆ ಪಡುಬಿದ್ರಿ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
