Home » ಉಡುಪಿ | ಮನೆ ಕಟ್ಟಡ ನಿರ್ಮಾಣದ ವೇಳೆ ಕಾಂಕ್ರೀಟ್ ಸ್ಲಾಬ್ ಕುಸಿದು ಬಿದ್ದು ಕಾರ್ಮಿಕ ಸಾವು

ಉಡುಪಿ | ಮನೆ ಕಟ್ಟಡ ನಿರ್ಮಾಣದ ವೇಳೆ ಕಾಂಕ್ರೀಟ್ ಸ್ಲಾಬ್ ಕುಸಿದು ಬಿದ್ದು ಕಾರ್ಮಿಕ ಸಾವು

0 comments

ಮನೆ ಕಟ್ಟಡ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಕಾಂಕ್ರೀಟ್ ಸ್ಲಾಬ್ ಕುಸಿದು ಬಿದ್ದು ಓರ್ವ ಸಾವನ್ನಪ್ಪಿ, ಇನ್ನೋರ್ವ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕೋಟತಟ್ಟು ಪಡುಕರೆ ಶಿರಸಿ ಮಾರಿಕಾಂಬ ದೇವಳದ ಹಿಂಭಾಗದಲ್ಲಿ ನಡೆದಿದೆ.

ಕೋಟತಟ್ಟು ಪಡುಕರೆ ರಾಜಶೇಖರ ಹಂದೆ ಅವರ ನೂತನ ಮನೆ ಕಾಮಗಾರಿ ನಡೆಯುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಾಲಿಗ್ರಾಮ ಗೆಂಡೆಕೆರೆ ನಿವಾಸಿ ಗಾರೆಮೇಸ್ತ್ರಿ ಮಂಜುನಾಥ (36) ತಲೆಗೆ ತೀವ್ರತರಹದ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ.

ಮತ್ತೋರ್ವ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿರುವ ಚೇತನ್ (28) ಎಂಬವರು ಗಂಭೀರ ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment